ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ : ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

 

ನವದೆಹಲಿ : ಕೋವಿಡ್‌ನ ಹೊಸ ರೂಪಾಂತರದ ಬಗ್ಗೆ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ, ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರಗಳನ್ನು ಕಳುಹಿಸಿದೆ.

ಈ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯಗಳಿಗೆ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ. ಶುಕ್ರವಾರ ಸಂಜೆ, ಕೇಂದ್ರವು ಎಲ್ಲಾ ರಾಜ್ಯಗಳ ಸಿಎಸ್‌ಗಳಿಗೆ ಪತ್ರಗಳ ಮೂಲಕ ಟೆಸ್ಟ್-ಟ್ರ್ಯಾಕ್-ಟ್ರೀಟ್(3T) ಲಸಿಕೆಯನ್ನು ಕೈಗೊಳ್ಳಲು ರಾಜ್ಯಗಳಿಗೆ ಸೂಚನೆಗಳನ್ನು ನೀಡಿದೆ.

ಮಾಸ್ಕ್ ಗಳನ್ನು ಧರಿಸುವುದು, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮತ್ತು ದೈಹಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ರಾಜ್ಯಗಳಿಗೆ ಸಲಹೆ ನೀಡಿದೆ.

ಹೊಸ ವರ್ಷಾಚರಣೆ ಮತ್ತು ಹಬ್ಬದ ಸಂದರ್ಭದಲ್ಲಿ ಜನರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. ಅಲ್ಲದೆ ರಾಜ್ಯಗಳು ಮತ್ತೆ ಲಸಿಕೆ ಹಾಕುವತ್ತ ಗಮನಹರಿಸಬೇಕು ಎಂದು ಪತ್ರದಲ್ಲಿ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *