Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್‌ 26ರಂದು ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ

---Advertisement---

 

ಚಿತ್ರದುರ್ಗ. ಜೂ.24: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಜಿಲ್ಲಾ ಆಸ್ಪತ್ರೆ, ನಗರಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಜೂನ್ 26ರಂದು ಬೆಳಿಗ್ಗೆ 9 ರಿಂದ 4 ರವರೆಗೆ ಚಿತ್ರದುರ್ಗ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ “ಬೃಹತ್ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರ” ಹಮ್ಮಿಕೊಳ್ಳಲಾಗಿದೆ.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತಿವಹಿಸುವರು. ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, 3ನೇ ವಾರ್ಡ್ ನಗರಸಭೆ ಸದಸ್ಯ ಹೆಚ್.ಶ್ರೀನಿವಾಸ್, ಜ್ಞಾನ ವಿಕಾಸ ವಿದ್ಯಾಸಂಸ್ಥೆ ಖಜಾಂಚಿ ಆರ್.ರಾಜೇಶ್ ಮದರಿ ಭಾಗವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಡಿಹೆಚ್‍ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಜಿ.ಓ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗಹಿಸುವರು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment