ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 14 : ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಯನಪೋಯ ಆಸ್ಪತ್ರೆ ಮಂಗಳೂರು, ಬಸವೇಶ್ವರ ಮೆಡಿಕಲ್ ಕಾಲೇಜು ಚಿತ್ರದುರ್ಗ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಬೆಂಗಳೂರು, ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಗಳೂರು ತಾಲ್ಲೂಕು ಆರೋಗ್ಯ ಇಲಾಖೆ ಇವರುಗಳ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಮಾ.17 ರಂದು ಬೆಳಿಗ್ಗೆ 10-30 ರಿಂದ ಸಂಜೆ ಆರು ಗಂಟೆಯವರೆಗೆ ಶರಣ ಬಸವೇಶ್ವರ ದಾಸೋಹ ಮಠ ದೊಣ್ಣೆಹಳ್ಳಿಯಲ್ಲಿ ನಡೆಯಲಿದೆ.
ರಕ್ತದೊತ್ತಡ, ಮಧುಮೇಹ, ಆಸ್ತಮ, ಕೈಕಾಲು ನೋವು, ಮಕ್ಕಳ, ಮಹಿಳೆಯರ ಆರೋಗ್ಯ ಸಮಸ್ಯೆ, ಕಣ್ಣು, ಕಿವಿ, ಮೂಗು, ಗಂಟಲು, ಹೃದಯದ ಸಮಸ್ಯೆ ಕುರಿತು ತಪಾಸಣೆ ನಡೆಸಿ ಔಷಧಿಗಳನ್ನು ನೀಡಲಾಗುವುದು. ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ವೈ.ಎನ್.ಸಂತೋಷ್‍ಕುಮಾರ್, ಬಂಟನಹಳ್ಳಿ ಮಂಜುಸ್ವಾಮಿ ಇವರುಗಳು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ : 9980907301, 7019321055 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…