ದಾವಣಗೆರೆ; ಮಾ.01 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪೆÇ್ಲೀಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz , EªÉÄïï Lr: dsmodvg@gmail.com ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















