ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಾ.2 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಆರನೆ ಗ್ಯಾರೆಂಟಿ ಘೋಷಿಸಬೇಕು. ಮಾಸಿಕ ಹನ್ನೆಡರು ಸಾವಿರ ರೂ.ಗಳ ವೇತನವನ್ನು ಹದಿನೈದು ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ಬಿಎಲ್‍ಓ.ಗಳಾಗಿ ನೇಮಿಸಿರುವುದನ್ನು ಹಿಂದಕ್ಕೆ ಪಡೆದು ಎಫ್.ಆರ್.ಎಸ್. ಕೈಬಿಡಬೇಕು. ಪ್ರತಿ ಮಗುವಿಗೆ ಒಂದು ದಿನಕ್ಕೆ ಐವತ್ತು ಪೈಸೆ ನೀಡಲಾಗುತ್ತಿದೆ. ಇದರಿಂದ ಗುಣಮಟ್ಟದ ಆಹಾರ ನೀಡಲು ಹೇಗೆ ಸಾಧ್ಯ. ಅದಕ್ಕಾಗಿ ಬೆಲೆ ಏರಿಕೆಗೆ ತಕ್ಕಂತೆ ಪೌಷ್ಠಿಕಾಂಶವುಳ್ಳ ಆಹಾರವನ್ನು ಮಕ್ಕಳಿಗೆ ನೀಡಬೇಕಲ್ಲದೆ ಅಂಗನವಾಡಿಯಲ್ಲಿ ಎಲ್‍ಕೆಜಿ. ಯುಕೆಜಿ.ಯನ್ನು ಆರಂಭಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು.
ಜಿಲ್ಲೆಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಪ್ಪದೆ ಮುಷ್ಕರದಲ್ಲಿ ಭಾಗವಹಿಸುವಂತೆ ಎಐಟಯುಸಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷೆ ಭಾಗ್ಯಮ್ಮ ಇವರುಗಳು ಮನವಿ ಮಾಡಿದ್ದಾರೆ.



