Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾ. 02 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಾ.2 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ತಿಳಿಸಿದ್ದಾರೆ.

 

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಆರನೆ ಗ್ಯಾರೆಂಟಿ ಘೋಷಿಸಬೇಕು. ಮಾಸಿಕ ಹನ್ನೆಡರು ಸಾವಿರ ರೂ.ಗಳ ವೇತನವನ್ನು ಹದಿನೈದು ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ಬಿಎಲ್‍ಓ.ಗಳಾಗಿ ನೇಮಿಸಿರುವುದನ್ನು ಹಿಂದಕ್ಕೆ ಪಡೆದು ಎಫ್.ಆರ್.ಎಸ್. ಕೈಬಿಡಬೇಕು. ಪ್ರತಿ ಮಗುವಿಗೆ ಒಂದು ದಿನಕ್ಕೆ ಐವತ್ತು ಪೈಸೆ ನೀಡಲಾಗುತ್ತಿದೆ. ಇದರಿಂದ ಗುಣಮಟ್ಟದ ಆಹಾರ ನೀಡಲು ಹೇಗೆ ಸಾಧ್ಯ. ಅದಕ್ಕಾಗಿ ಬೆಲೆ ಏರಿಕೆಗೆ ತಕ್ಕಂತೆ ಪೌಷ್ಠಿಕಾಂಶವುಳ್ಳ ಆಹಾರವನ್ನು ಮಕ್ಕಳಿಗೆ ನೀಡಬೇಕಲ್ಲದೆ ಅಂಗನವಾಡಿಯಲ್ಲಿ ಎಲ್‍ಕೆಜಿ. ಯುಕೆಜಿ.ಯನ್ನು ಆರಂಭಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು.

 

ಜಿಲ್ಲೆಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಪ್ಪದೆ ಮುಷ್ಕರದಲ್ಲಿ ಭಾಗವಹಿಸುವಂತೆ ಎಐಟಯುಸಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷೆ ಭಾಗ್ಯಮ್ಮ ಇವರುಗಳು ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now