Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಫೆಬ್ರವರಿ 16 ರಂದು ವಿವಿಧ ಸಂಘಟನೆಗಳ ಬೃಹತ್ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 : ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾರ್ಮಿಕರು, ದುಡಿಯುವ ವರ್ಗದವರಿಗೆ ಶೋಷಣೆಯಾಗುತ್ತಿರುವುದನ್ನು ವಿರೋಧಿಸಿ ಎ.ಐ.ಟಿ.ಯು.ಸಿ. ಸಿ.ಐ.ಟಿ.ಯು.
ಐ.ಎನ್.ಟಿ.ಯು.ಸಿ. ಎ.ಐ.ಸಿ.ಸಿ.ಟಿ.ಯು. ವಿವಿಧ ಸಂಘಟನೆಗಳು ಫೆ.16 ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿರುವುದರಿಂದ ಜಿಲ್ಲೆಯಾದ್ಯಂತ ಅಂದು ಪ್ರತಿಭಟನೆ ನಡೆಸಲಾಗುವುದೆಂದು ಸಿ.ಐ.ಟಿ.ಯು.ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‍ಪೀರ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಕಾರ್ಮಿಕ ವರ್ಗದವರಿಗೆ ತಿಂಗಳಿಗೆ 31 ಸಾವಿರದ ಐದು ನೂರು ರೂ.ವೇತನ ನಿಗಧಿಪಡಿಸಬೇಕು. ನೋಟ್ ಬ್ಯಾನ್ ಒಂದು ಕಡೆಯಾದರೆ ಜಿ.ಎಸ್.ಟಿ. ಹೆಚ್ಚಿಸಿ ಬಡವರ ಮೇಲೆ ಕೇಂದ್ರ ಸರ್ಕಾರ ಬರೆ ಎಳೆಯುತ್ತಿದೆ. ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ 98 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಆರ್ಥಿಕ ಅಸಮಾನತೆ ತಾಂಡವವಾಡುತ್ತಿದೆ. ಒಟ್ಟಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಹಾಲು, ಹಣ್ಣು, ಮೊಟ್ಟೆ ಬಡವರ ಕೈಗೆ ಸಿಗದಂತಾಗಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ರೈಲ್ವೆ ಖಾಸಗಿಯವರಿಗೆ ಮಾರಾಟವಾಗುತ್ತಿದೆ. ಗಿರಿ ಪರ್ವತಗಳನ್ನು ಬಿಟ್ಟಿಲ್ಲ. ಇಂತಹ ಸರ್ಕಾರಕ್ಕೆ ಪಾರ್ಲಿಮೆಂಟ್ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಬೇಕೆಂದು ಸಿ.ಕೆ.ಗೌಸ್‍ಪೀರ್ ಮನವಿ ಮಾಡಿದರು.

ಸಿಪಿಐ. ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆಂದು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ಸುಳ್ಳು ಹೇಳಿ ದೇಶದ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಕೋವಿಡ್ ಬಂದಾಗಿನಿಂದಲೂ 60 ರಿಂದ 70 ಕೋಟಿ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ. ಬ್ರಿಟೀಷರ ಕಾಲದಲ್ಲಿಯೂ ಇಂತಹ ಶೋಷಣೆಯಿರಲಿಲ್ಲ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿ ದೇಶದ ಜನರಿಗೆ ಮಂಕು ಬೂದಿ ಎರಚುತ್ತಿರುವ ಪ್ರಧಾನಿ ಮೋದಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠ ಕಲಿಸಬೇಕು. 44 ಕಾರ್ಮಿಕ ಕಾಯಿದೆ ಕೋಡ್‍ಗಳನ್ನು ರದ್ದುಪಡಿಸಿ ಕೇವಲ ನಾಲ್ಕು ಕೋಡ್‍ಗಳನ್ನು ಮಾತ್ರ ಉಳಿಸಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಗಾಗಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಸಾರ್ವಜನಿಕರು ಫೆ. 16 ರ ಪ್ರತಿಭಟನೆಗೆ ಬೆಂಬಲಿಸುವಂತೆ ವಿನಂತಿಸಿದರು.

ಎ.ಐ.ಟಿ.ಯು.ಸಿ. ತಾಲ್ಲೂಕು ಉಪಾಧ್ಯಕ್ಷ ರಾಜಣ್ಣ, ಸಿಪಿಐ. ತಾಲ್ಲೂಕು ಸಹ ಕಾರ್ಯದರ್ಶಿ ಕಾಂ.ಸತ್ಯಕೀರ್ತಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಮಾರಸ್ವಾಮಿ ವಿರುದ್ಧ ಮತ್ತೊಂದು ದೂರು ದಾಖಲು : ಬೆದರಿಕೆ ಹಾಕಿದ್ದಾರೆಂದು ಕಂಪ್ಲೈಂಟ್ ಕೊಟ್ಟ ಎಡಿಜಿಪಿ..!

    ಕಳೆದ ಕೆಲವು ದಿನಗಳ ಹಿಂದೆ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವೆ ಮಾತಿನ ಯುದ್ಧ, ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದವು. ಇದೀಗ ಎಡಿಜಿಪಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ.

DCP ಆಗಿ ಅಧಿಕಾರ ವಹಿಸಿಕೊಂಡ RCB ಸ್ಟಾರ್ ಕ್ರಿಕೆಟರ್ : ಸಿರಾಜ್ ಸಂಬಳ ಎಷ್ಟು ಗೊತ್ತಾ..?

ಟೀಂ ಇಂಡಿಯಾದ ಸ್ಟಾರ್ ವೇಗಿ ಎಂದೇ ಗುರುತಿಸಿಕೊಂಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಸಿರಾಜ್ ಗೆ ಅಭಿಮಾನಿಗಳು ಕೂಡ ವಿಶ್ ಮಾಡಿದ್ದಾರೆ. ಸದ್ಯ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ

ದರ್ಶನ್ ಹೊರ ಬರುವ ಸುಳಿವು ಕೊಟ್ರಾ ವಿಜಯಲಕ್ಷ್ಮೀ: ಅಭಿಮಾನಿಗಳಿಗೆ ಹೇಳಿದ್ದೇನು..?

  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ಫ್ಯಾಮಿಲಿ, ಫ್ರೆಂಡ್ಸ್, ಫ್ಯಾನ್ಸ್ ತುದಿಗಾಲಿನಲ್ಲಿ ನಿಂತು ನಮ್ಮ ಡಿ ಬಾಸ್ ಯಾವಾಗ ಬರ್ತಾರೆ ಅಂತ ಕಾಯ್ತಿದ್ದಾರೆ. ದಸರಾಗಾದರೂ

error: Content is protected !!