Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ.ಪೂ.ಶಿಕ್ಷಣ ಇಲಾಖೆ ಜಿ.ಪಂ.ಅಧೀನಕ್ಕೆ ವಿರೋಧಿಸಿ ಡಿಸೆಂಬರ್ 01 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ನ. 29 :  ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಪಂ ಅಧೀನಕ್ಕೆ ಒಳಪಡಿಸಿರುವ ರಾಜ್ಯ ಸರ್ಕಾರದ ಆದೇಶ ಹಿಂಪಂಡೆಯುವಂತೆ ಒತ್ತಾಯಿಸಿ ನವೆಂಬರ್ 23 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿಸಿದ್ದರೂ ಸರ್ಕಾರ ಮಾತ್ರ ಈವರೆಗೂ ಯಾವುದೇ ಸಕಾರಾತ್ಮಕ ನಿಲುವು ಪ್ರಕಟಿಸಿಲ್ಲ.

ಹೀಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ಇದೇ ಡಿಸೆಂಬರ್ ಒಂದನೇ ತಾರೀಖು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ, ಉಪನ್ಯಾಸಕರ ಹಾಗೂ ಬೋಧಕೇತರ ಒಕ್ಕೂಟ ಕರೆ ನೀಡಿದೆ.

ಬಾಲಕರ ಸರ್ಕಾರಿ ಪಪೂ ಕಾಲೇಜಿನಲ್ಲಿ ಬುಧವಾರ ನಡೆದ ಮೂರು ಸಂಘಗಳ ಅಧ್ಯಕ್ಷರು,ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆಯಲ್ಲಿ ಮಾತಾನಾಡಿದ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ಮಲ್ಲೇಶ್ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು,ಉಪನ್ಯಾಸಕರು ಹಾಗೂ ಬೋಧಕೇತರ ನೌಕರರು ಸ್ವಯಂ ಪ್ರೇರಿತರಾಗಿ ಆ ದಿನ ಸಾಂದರ್ಭಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಜರುಗುವ ಬೃಹತ್ ಸಮಾವೇಶದಲ್ಲಿ  ಭಾಗಿಯಾಗುವಂತೆ  ಮನವಿ ಮಾಡಿದರು.

ಇಡೀ ದೇಶಕ್ಕೆ ಮಾದರಿ ಎನಿಸುವ ಗುಣಮಟ್ಟದ ಶಿಕ್ಷಣ ಹಾಗೂ ಸಿಇಟಿ ಅರ್ಹತಾ ಪರೀಕ್ಷೆಗಳನ್ನು ನಡೆಸಿ ಸೈ ಎನಿಸಿಕೊಂಡ ಪಪೂ ಶಿಕ್ಷಣ ಇಲಾಖೆ ನಮ್ಮದು.ಬದಲಾವಣೆಯ ಹೆಸರಿನಲ್ಲಿ ಪಪೂಶಿ ಇಲಾಖೆಯ ಅಸ್ತಿತ್ವಕ್ಕೆ ದಕ್ಕೆಯಾಗಲಿದೆ. ಅದ್ದರಿಂದ ನಾವುಗಳು ಮೌನವಹಿಸದೆ ಒಗ್ಗಾಟ್ಟಾಗಿ ವಿರೋಧಿಸಬೇಕಿದೆ ಎಂದು ತಿಳಿಸಿ ಜಿಲ್ಲೆಯ ಆರು ತಾಲ್ಲೂಕಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ನೌಕರರನ್ನು ಕರೆ ತರುವ ಜವಾಬ್ದಾರಿಯನ್ನು ಆಯಾ ತಾಲ್ಲೂಕಿನ ಉಪನ್ಯಾಸಕರ ಸಂಘದ ಅಧ್ಯಕ್ಷರಿಗೆ ವಹಿಸಲಾಯಿತು.

ಬೆಂಗಳೂರು ಸಮಾರಂಭದಲ್ಲಿ  ಭಾಗವಹಿಸುವ ನೌಕರರು ಆಯಾ ತಾಲ್ಲೂಕು ಅಧ್ಯಕ್ಷರಲ್ಲಿ ತಮ್ಮ ಹೆಸರು ನೋಂದಾಯಿಸುವ ಮೂಲಕ ಒಟ್ಟಿಗೆ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾದ ಎಲ್.ರಂಗಪ್ಪ ತಿಳಿಸಿದರು.

ಬೆಂಗಳೂರಿಗೆ ಹೋಗಿ ಬರುವ ವಾಹನ,ಉಪಹಾರ ಊಟದ ವ್ಯವಸ್ಥೆ ಜವಾಬ್ದಾರಿಯನ್ನು ಪ್ರಾಚಾರ್ಯರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಕೆ.ನಾಗಣ್ಣ ಹಾಗೂ ಉಪನ್ಯಾಸಕರ ಸಂಘದ ಕಾರ್ಯಾಧ್ಯಕ್ಷರಾದ ಜಿ.ಎಸ್.ತಿಪ್ಪೇಸ್ವಾಮಿಯವರಿಗೆ ವಹಿಸಲಾಯಿತು.

ಸಭೆಯಲ್ಲಿ ಬೋಧಕೇತರ ಸಂಘದ ಜಿಲ್ಲಾಧ್ಯಕ್ಷ ಟಿ.ದುರುಗೇಶಪ್ಪ,ಜಿಲ್ಲಾ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಪಿ.ಕಾಂತರಾಜ್,ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ಆರ್.ಚಂದ್ರಶೇಖರ್, ಶಾಖಾಧಿಕಾರಿಗಳಾದ ಟಿ.ಎಂ. ಬಸವಯ್ಯ, ಉಪನ್ಯಾಸಕರಾದ ಡಿ.ಶ್ರೀನಿವಾಸ್, ಪಿ.ಎಂ.ಜಿ.ರಾಜೇಶ್,ಹೆಚ್.ಬಿ. ಬಸವರಾಜ್, ಎಂ.ಜೈಶ್ರೀನಿವಾಸ್, ಎ.ನಾಗರಾಜ್,ವಿ.ಚನ್ನಬಸಪ್ಪ, ಒ.ನಾಗರಾಜ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...