Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಫೆ. 23 ರಂದು ಸಚಿವರ ಕಚೇರಿ ಎದುರು ಬೃಹತ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಬಜೆಟ್ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಫೆ.23 ರಂದು ಹಿರಿಯೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಹುಲ್ಲೂರು ಕುಮಾರಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿಯನ್ನು ಜಾರಿಗೊಳಿಸಲು ನ್ಯಾಯಮೂರ್ತಿ
ಹೆಚ್.ಎನ್.ನಾಗಮೋಹನ್‍ದಾಸ್ ಆಯೋಗದ ಶಿಫಾರಸ್ಸಿನಂತೆ ಜಾರಿಗೊಳಿಸದೆ ರಾಜ್ಯ ಸರ್ಕಾರ ಕೆಲವು ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿಯನ್ನು ಜಾರಿಗೊಳಿಸಿ ಗೊಂದಲಕ್ಕೀಡು ಮಾಡಿದೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಎಲ್ಲಾ ಗೊಂದಲಗಳನ್ನು ನಿವಾರಿಸಿ ಒಳ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

 

ನೇರ ನೇಮಕಾತಿ ಜೊತೆಗೆ ಪದೋನ್ನತಿಯಲ್ಲೂ ಹಾಗೂ ಬ್ಯಾಕ್‍ಲಾಗ್, ಕೆಐಎಡಿಬಿ. ಬಿಡಿಎ. ಸರ್ಕಾರಿ ಗುತ್ತಿಗೆ ಸೇರಿದಂತೆ ಎಲ್ಲಾ ರಂಗಗಳಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. ಎಸ್ಸಿಪಿ. ಟಿಎಸ್ಪಿ. ಅನುದಾನದಲ್ಲಿಯೂ ಸಹ 6:6:5 ರ ಅನುಪಾತದಲ್ಲಿ ಹಂಚಿಕೆಯಾಗಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ. ಒಂದರಷ್ಟು ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ಯಾಕೇಜ್ ಘೋಷಿಸಬೇಕು. ಶಾಶ್ವತ ಆಯೋಗ ನೇಮಕ ಹಾಗೂ ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಒಳ ಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ಆದಿಜಾಂಬವ ಅಭಿವೃದ್ದಿ ನಿಗಮ, ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ, ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮಗಳಿಗೆ ತಲಾ 2 ಸಾವಿರ ಕೋಟಿ ರೂ. ಅನುದಾನ ನೀಡಬೇಕು. ರಾಜ್ಯ ಸರ್ಕಾರವು ಕೇಂದ್ರಕ್ಕೆ ಶೇ.17 ರಷ್ಟು ಮೀಸಲಾತಿಯನ್ನು ಸಂವಿಧಾನದ 9 ನೇ ಷೆಡ್ಯೂಲ್‍ಗೆ ಸೇರಿಸಲು ಪ್ರಸ್ತಾವ ಸಲ್ಲಿಸಿದ್ದರೂ ಬಿಜೆಪಿ. ನೇತೃತ್ವದ ಸರ್ಕಾರ ಸೇರಿಸದೆ ದ್ರೋಹವೆಸಗುತ್ತಿರುವುದನ್ನು ವಿರೋಧಿಸಿ ಸಚಿವರ ಕಚೇರಿ ಎದುರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ದಲಿತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗು ಎಲ್ಲಾ ಪಕ್ಷಗಳ ಮುಖಂಡರುಗಳು ಪಾಲ್ಗೊಳ್ಳುವಂತೆ ಹುಲ್ಲೂರು ಕುಮಾರಸ್ವಾಮಿ ಮನವಿ ಮಾಡಿದರು.
ವೈ.ರಾಜಣ್ಣ ತುರುವನೂರು, ರಮೇಶ್, ಶಿವರಾಜ್, ಟಿ.ರವಿ, ಯೋಗರಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...