ಮಂಡ್ಯ: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ, ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆಯಲ್ಲಿ ಬಾಲಕಿಯರ ಸರ್ಕಾರಿ ಕಾಲೇಜಿನಿಂದ ಹಿಡಿದು ಡಿಸಿ ಕಚೇರಿಯ ತನಕ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆಯಲ್ಲಿ ಸಾಗುವಾಗ ರಾಮನ ಮಕ್ಕಳು ನಾವೆಲ್ಲಾ ಬಾಬರ್ ಸಂತತಿ ಬೇಕಿಲ್ಲ ಎಂದು ಘೋಷಣೆ ಕೂಗಿದ್ದಾರೆ.
ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು, ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಒತ್ತಾಯಿಸಿದ್ದಾರೆ. ಬಾಂಬ್ ಹಾಕಿ ಬಾಂಬ್ ಹಾಕಿ ಇಸ್ಲಾಂಗೆ ಬಾಂಬ್ ಹಾಕಿ. ನಾವೆಲ್ಲಾ ರಾಮನ ಮಕ್ಕಳು. ಹರಹರ ಮಹದೇವ್ ಎಂದು ಘೋಷಣೆ ಕೂಗಿದ್ದಾರೆ.
ಪ್ರತಿಭಟನಾಕಾರರು ಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ತಳ್ಳಾಟ, ನೂಕಾಟವಾಗಿದೆ. ಕೆಲವು ಕಾರ್ಯಕರ್ತರು ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ. ಬ್ಯಾರಿಕೇಡ್ ಕಿತ್ತೆಸೆದು ಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಡಿಸಿ, ಎಸ್ಪಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಮನವಿಯನ್ನು ಸ್ವೀಕರಿಸಿದ್ದಾರೆ. ಹಿಂದೂ ಸಂಘಟನೆಗಳನ್ನು ನಾಶ ಮಾಡುತ್ತೇವೆ ಎನ್ನುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…