Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಆಗಸ್ಟ್ 12 ರಂದು ಬೃಹತ್ ಜಾಥಾ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ. 10 : ಚಿತ್ರದುರ್ಗ ನಗರದ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳ ಮೇಲೆ ಕಳಂಕವನ್ನು ತರಲು ಒಳ ಸಂಚು ನಡೆಸುತ್ತಿದ್ದು ಇದನ್ನು ಖಂಡಿಸಿ ಆ. 12 ರ ಮಂಗಳವಾರದಂದು ಚಿತ್ರದುರ್ಗ ನಗರದಲ್ಲಿ ಬೃಹತ್ ಜಾಥಾವನ್ನು ನಡೆಸಲಾಗುವುದೆಂದು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ರೂಪ ಜನಾರ್ಧನ್, ಕಾರ್ಯಾಧ್ಯಕ್ಷರಾದ ಸಿ.ಬಿ.ನಾಗರಾಜ್ ಹಾಗೂ ನಾಗರಾಜ್ ಸಂಗಂ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಯಿಂದ ನಗರದ ನೀಲಕಂಠೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಜಿಲ್ಲೆಯ ಆರು ತಾಲ್ಲೂಕುಗಳಿಂದ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ಈ ಜಾಥಾದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ವೃತ್ತದಲ್ಲಿ ಬಹಿರಂಗ ಸಭೆಯನ್ನು ನಡೆಸುವುದರ ಮೂಲಕ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಮಾತನಾಡಲಾಗುವುದು. ಇದಾದ ನಂತರ ಜಿಲ್ಲಾಧಿಕಾರಿಯವರಿಗೆ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆವತಿಯಿಂದ ಮನವಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment