Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತೀಯ ರೈಲ್ವೆಯಲ್ಲಿ ಬೃಹತ್ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್,ಮೇ.14: ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಹುದ್ದೆಯ ವಿವರಗಳು:
ಹುದ್ದೆಯ ಹೆಸರು: ಸಹಾಯಕ ಲೋಕೋ ಪೈಲಟ್ (ALP).

ಒಟ್ಟು ಹುದ್ದೆಗಳು: 11,127.

ವೇತನ ಶ್ರೇಣಿ: ಆರಂಭಿಕ ವೇತನ ₹19,900 (7ನೇ ಸಿಪಿಸಿ ಪೇ ಲೆವೆಲ್-2 ರಂತೆ).

ವಯೋಮಿತಿ: 01.01.2026 ಕ್ಕೆ ಅನ್ವಯವಾಗುವಂತೆ 18 ರಿಂದ 30 ವರ್ಷಗಳು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: 15 ಮೇ 2026.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಜೂನ್ 2026 (ರಾತ್ರಿ 23:59 ರವರೆಗೆ).

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್‌ಸೈಟ್ https://www.rrbapply.gov.in ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಆರ್‌ಆರ್‌ಬಿ ವೆಬ್‌ಸೈಟ್‌ಗಳಲ್ಲೂ ಈ ಕುರಿತ ಹೆಚ್ಚಿನ ಮಾಹಿತಿ ಲಭ್ಯವಿರುತ್ತದೆ.

ಅಭ್ಯರ್ಥಿಗಳಿಗೆ ಸೂಚನೆ:
ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಬಳಸಲು ಸೂಚಿಸಲಾಗಿದೆ. ಆಧಾರ್‌ನಲ್ಲಿರುವ ಹೆಸರು ಮತ್ತು ಜನ್ಮ ದಿನಾಂಕವು 10ನೇ ತರಗತಿಯ ಪ್ರಮಾಣಪತ್ರಕ್ಕೆ ಅನುಗುಣವಾಗಿರಬೇಕು.

ಬಯೋಮೆಟ್ರಿಕ್ ಮತ್ತು ಫೋಟೋಗಳನ್ನು ನವೀಕರಿಸಿರಬೇಕು.

ಮಧ್ಯವರ್ತಿಗಳು ಮತ್ತು ಉದ್ಯೋಗ ವಂಚಕರ ಬಗ್ಗೆ ಜಾಗರೂಕರಾಗಿರಲು ರೈಲ್ವೆ ಇಲಾಖೆ ಎಚ್ಚರಿಕೆ ನೀಡಿದೆ.

ಹೆಚ್ಚಿನ ವಿವರಗಳಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಓದಲು ಅಭ್ಯರ್ಥಿಗಳು ಆಯಾ ವಲಯದ ಆರ್‌ಆರ್‌ಬಿ ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now