ಗುರು-ಶಿಷ್ಯರ ಸಂಬಂಧಗಳು ಕಾಲ ಕಾಲಕ್ಕೆ ತಕ್ಕಂತೆ ಬದಲಾಗುತ್ತಿವೆ : ಡಾ.ಎಂ.ಕೆ.ಪ್ರಭುದೇವ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಸೆ. 16 :
ಶಿಕ್ಷಕನಾದವನು ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬಿದರೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ.ಎಂ.ಕೆ.ಪ್ರಭುದೇವ ತಿಳಿಸಿದರು.

ರೋಟರಿ ಕ್ಲಬ್ ಚಿನ್ಮೂಲಾದ್ರಿವತಿಯಿಂದ ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ, ಅಭಿಯಂತರರ ದಿನಾಚರಣೆ ಮತ್ತು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಕ ಮತ್ತು ವಿದ್ಯಾರ್ಥಿಗಳ ಸಂಬಂಧಕ್ಕೆ ಅದರದೇ ಆದ ಮಹತ್ವ ಇದೆ. ಗುರು-ಶಿಷ್ಯರಲ್ಲಿ ಆತ್ಮೀಯತೆ, ವಿಶ್ವಾಸ, ನಂಬಿಕೆ,ಗೌರವ ಈ ಹಿಂದೆ ಇತ್ತು ಆದರೆ ಈಗ ಕಾಲ ಬದಲಾಗಿದೆ. ವಿದ್ಯಾರ್ಥಿಗಳಿಗೆ ಗುರುಗಳಾದವರು ವಂದಿಸಿ ಬುದ್ದಿಯನ್ನು ಹೇಳ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಗುರು-ಶಿಷ್ಯರ ಸಂಬಂಧಗಳು ಕಾಲ ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಅದರಂತೆ ಮೌಲ್ಯಗಳು ಸಹಾ ಕಡಿಮೆಯಾಗುತ್ತಿವೆ. ಹಿಂದಿನ ಕಾಲದ ಭೋದನೆಗೂ ಇಂದಿನ ಕಾಲದ ಭೋಧನೆಗೂ ಬಹಳವಾದ ವ್ಯತ್ಯಾಸ ಇದೆ, ಅದೇ ರೀತಿ ಗುರು-ಶಿಷ್ಯರಲ್ಲಿಯೂ ಸಹಾ ವಿಭಿನ್ನವಾದ ಅಭೀಪ್ರಾಯಗಳಿವೆ. ಶಿಕ್ಷಕರಾದವರ ಮೇಲೆ ಗುರುತರವಾಧ ಜವಾಬ್ದಾರಿಗಳಿವೆ, ಅದನ್ನು ಅರಿತು ಭೋದನೆಯನ್ನು ಮಾಡಬೇಕಿದೆ. ವಿದ್ಯಾರ್ಥಿಗಳನ್ನು ಉತ್ತಮ ದಾರಿಗೆ ತರುವಲ್ಲಿ ಶಿಕ್ಷಕರು ಮಾತ್ರವಲ್ಲದೆ ಪೋಷಕರು, ಸಮಾಜದ ಕರ್ತವ್ಯ, ಹೊಣೆಗಾರಿಕೆ ಜವಾಬ್ದಾರಿಯು ಸಹಾ ಇದೆ. ಇಂದಿನ ವಿದ್ಯಾರ್ಥಿಗಳ ಮನ ಸ್ಥಿತಿಯನ್ನು ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಇಂದು ನಿರ್ಮಾಣವಾಗಿದೆ ಎಂದು ಪ್ರಭುದೇವ ತಿಳಿಸಿದರು.

ಶಿಕ್ಷಕನಾದವರು ತನ್ನ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ತುಂಬುವುದರ ಮುಲಕ ಸಮಾಜಕ್ಕೆ ಉತ್ತಮವಾದ ವ್ಯಕ್ತಿಯನ್ನು ನೀಡಬೇಕಿದೆ.  ಇದೇ ರೀತಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತವಾದ ಪ್ರತಿಭೆಯನ್ನು ಸಹಾ ಹೂರಕ್ಕೆ ತರುವ ಕಾರ್ಯವನ್ನು ಮಾಡಬೇಕಿದೆ. ಆಗ ಮಾತ್ರ ಉತ್ತಮ ಶಿಕ್ಷಕನಾಗಲು ಸಾಧ್ಯವಿದೆ ಎಂದ ಅವರು, ವಿದ್ಯಾರ್ಥಿಗಳು ನಿಂತ ನೀರಾಗದೆ ಹರಿಯುವ ನೀರಾಗುವುದರ ಮೂಲಕ ತಮ್ಮ ಪ್ರತಿಭೆಯನ್ನು ಹೂರ ಹಾಕಬೇಕಿದೆ ಶಿಕ್ಷಕ-ವಿದ್ಯಾರ್ಥಿಗಳಲ್ಲಿ ಆತ್ಮೀಯತೆ ಇರಬೇಕಿದೆ. ದ್ವೇಷ ಅಸೂಯೆ ದೂರವಾಗಬೇಕಿದೆ. ಮನಸ್ಸಿನಲ್ಲಿ ಉತ್ತಮವಾದ ಭಾವನೆಯನ್ನು ಮೂಡಿಸಬೇಕಿದೆ. ಗುರು-ಶಿಷ್ಯರ ಸಂಬಂಧಗಳು ಭದ್ರವಾದ ಬುನಾದಿಯಾಗಬೇಕಿದೆ ಕವಲು ಹೊಡೆದ ದಾರಿಯಾಗಬಾರದೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಅಧ್ಯಕ್ಷರಾದ ಶಂಕರಪ್ಪ ಮಾತನಾಡಿ ಇಂದಿನ ದಿನಮಾನದಲ್ಲಿ ಒಬ್ಬ ಇಂಜಿನಿಯರ್ ಅನ್ನು ನಿರ್ಮಾಣ ಮಾಡಲು ಹಲವಾರು ಜನತೆಯ ಶ್ರಮ ಇರುತ್ತದೆ. ಪೂರ್ಣ ಪ್ರಮಾಣದಲ್ಲಿ ಕಲಿತ ಮೇಲೆ ಅತ ತನ್ನ ದೇಶವನ್ನು ಬಿಟ್ಟು ಬೇರೆ ದೇಶಕ್ಕೆ ಹಾರಿ ಹೋಗುವುದರ ಮೂಲಕ ಅಲ್ಲಿ ತನ್ನ ನಿಷ್ಠೆಯನ್ನು ತೋರಿಸುವುದರ ಮೂಲಕ ಕಲತ ತನ್ನ ದೇಶಕ್ಕೆ ದ್ರೋಹವನ್ನು ಮಾಡುತ್ತಾನೆ ಈ ಪದ್ದತಿ ಹೋಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಕಾರ್ಯದರ್ಶೀ ಲಕ್ಷ್ಮೀಕಾಂತ, ಮಾಜಿ ಗೌರ್ನರ್ ಗಾಯತ್ರಿ ಶಿವರಾಂ, ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

ಜನತಾ ದರ್ಶನದಲ್ಲಿ ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ..!

  ಕೋಲಾರ: ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯ ದಿನ. ರಾಜ್ಯಾದ್ಯಂತ ಒಂದೇ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ ತುಂಬಿದ

error: Content is protected !!