Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರೀಕ್ಷಾ ಅಕ್ರಮ ತಡೆಗೆ ಮಾಸ್ಟರ್ ಪ್ಲಾನ್: ಪೇಪರ್ ಲೀಕ್ ಮಾಡಿದರೆ 10 ವರ್ಷ ಜೈಲು, 50 ಲಕ್ಷ ರೂ. ದಂಡ!

---Advertisement---

ದೆಹಲಿ.ಜುಲೈ.25: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಯುವಜನರ ಭವಿಷ್ಯಕ್ಕೆ ಕಂಠಕವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನು ಜಾರಿಗೆ ಮುಂದಾಗಿದೆ. ಪೇಪರ್ ಲೀಕ್ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಕಾಯ್ದೆ-2026’ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅಂಕಿತ ಹಾಕಿದೆ. ಈ ಮಸೂದೆಯನ್ನು ಸೋಮವಾರವೇ ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ಸಜ್ಜಾಗಿದೆ.

ಹೊಸ ತಿದ್ದುಪಡಿ ಮಸೂದೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ದಂಡನೆಗಳನ್ನು ದುಪ್ಪಟ್ಟುಗೊಳಿಸಲಾಗಿದೆ. ಹಾಲಿ ಇರುವ 2024ರ ಕಾಯ್ದೆಯಲ್ಲಿದ್ದ 3 ರಿಂದ 5 ವರ್ಷಗಳ ಜೈಲು ಶಿಕ್ಷೆಯ ಅವಧಿಯನ್ನು ಕನಿಷ್ಠ 5 ವರ್ಷದಿಂದ ಗರಿಷ್ಠ 10 ವರ್ಷಗಳಿಗೆ ಹೆಚ್ಚಿಸಲಾಗಿದೆ. ಅದರೊಂದಿಗೆ ದಂಡದ ಪ್ರಮಾಣವನ್ನು 10 ಲಕ್ಷ ರೂಪಾಯಿಯಿಂದ ನೇರವಾಗಿ 50 ಲಕ್ಷ ರೂಪಾಯಿಗೆ ಏರಿಸಲಾಗಿದೆ.

ಪರೀಕ್ಷೆಗಳನ್ನು ನಡೆಸುವ ಖಾಸಗಿ ಸಂಸ್ಥೆಗಳು ಅಥವಾ ಸೇವಾ ಪೂರೈಕೆದಾರರು ಅಕ್ರಮದಲ್ಲಿ ಭಾಗಿಯಾಗಿದ್ದರೆ, ಅವರಿಗೆ ಬರೋಬ್ಬರಿ 5 ಕೋಟಿ ರೂಪಾಯಿವರೆಗೆ ದಂಡ ವಿಧಿಸಲು ಮತ್ತು 8 ವರ್ಷಗಳ ಕಾಲ ಯಾವುದೇ ಪರೀಕ್ಷೆ ನಡೆಸದಂತೆ ನಿಷೇಧ ಹೇರಲು ಮಸೂದೆ ಪ್ರಸ್ತಾಪಿಸಿದೆ. ಸಂಘಟಿತ ಪರೀಕ್ಷಾ ಅಕ್ರಮ ನಡೆಸುವ ಜಾಲಗಳಿಗೆ ಕನಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ ಕನಿಷ್ಠ 10 ಕೋಟಿ ರೂಪಾಯಿ ದಂಡ ವಿಧಿಸುವ ನಿಬಂಧನೆಗಳನ್ನು ಒಳಗೊಳ್ಳಲಾಗಿದೆ.

ವೇಗದ ತನಿಖೆ ಮತ್ತು ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್:

ಪ್ರಕರಣಗಳ ಶೀಘ್ರ ತನಿಖೆಗೆ ವಿಶೇಷ ಕಾರ್ಯಪಡೆ (STF) ರಚನೆಗೆ ಅವಕಾಶ ನೀಡಲಾಗಿದ್ದು, ಯಾವುದೇ ಪೇಪರ್ ಲೀಕ್ ಪ್ರಕರಣದ ತನಿಖೆಯನ್ನು ಕೇವಲ 2 ತಿಂಗಳುಗಳಲ್ಲಿ ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅಷ್ಟೇ ಅಲ್ಲದೆ, ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ’ಗಳನ್ನು ಸ್ಥಾಪಿಸಲಾಗುತ್ತದೆ. ಚಾರ್ಜ್ಶೀಟ್ ಸಲ್ಲಿಕೆಯಾದ 3 ತಿಂಗಳಲ್ಲಿ ದೈನಂದಿನ ವಿಚಾರಣೆ ನಡೆಸಿ ತೀರ್ಪು ನೀಡಬೇಕಾಗುತ್ತದೆ.

Join WhatsApp

Join Now

Join Telegram

Join Now