ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 06 : ಜಿಲ್ಲಾ ವಕ್ಫ್ ಸಲಹಾ ಸಮಿತಿ ಚೇರ್ಮನ್ ಸ್ಥಾನಕ್ಕೆ ಇಕ್ಬಾಲ್ ಹುಸೇನ್(ಎಂ.ಸಿ.ಓ.ಬಾಬು) ತಮ್ಮ ರಾಜಿನಾಮೆಯನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಕೆಲಸದ ಒತ್ತಡ ಹಾಗೂ ವೈಯಕ್ತಿಕ ಕಾರಣಗಳಿಂದಾಗಿ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ ಹಾಗೂ ವಕ್ಫ್‍ಬೋರ್ಡ್‍ನ ಎಲ್ಲಾ ಸ್ಥಾನಮಾನಗಳಿಗೆ ರಾಜಿನಾಮೆ ನೀಡಿರುವುದಾಗಿ ಇಕ್ಬಾಲ್ ಹುಸೇನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.