Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್‍ಆರ್‍ಎಸ್ ಹೆರಿಟೇಜ್ ಶಾಲೆಯಲ್ಲಿ ಅರ್ಥಪೂರ್ಣ ಗುರುಪೂರ್ಣಿಮೆ ಆಚರಣೆ | ಗುರು ಇಲ್ಲದ ಬದುಕು ನಾವಿಕನಿಲ್ಲದ ಹಡಗಿನಂತೆ : ಶ್ರೀಮತಿ ಸುಜಾತ ಲಿಂಗಾರೆಡ್ಡಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜುಲೈ. 22 : ಮನುಷ್ಯನ ಜೀವನದಲ್ಲಿ ಗುರುವು ಮಹತ್ವದ ಪಾತ್ರ ವಹಿಸುತ್ತಾರೆ. ಭಾರತೀಯರಲ್ಲಿ ಗುರುಪೂರ್ಣಿಮೆಗೆ ಬಹಳ ಪ್ರಾಮುಖ್ಯತೆ ಇದೆ. ಗುರು ಇಲ್ಲದ ಬದುಕು ನಾವಿಕನಿಲ್ಲದ ಹಡಗಿನಂತೆ ಎಂದು ಎಸ್‍ಆರ್‍ಎಸ್ ಶಿಕ್ಷಣ ಸಮೂಹ ಸಂಸ್ಥೆಯ ”ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿಯವರು ಹೇಳಿದರು.

ನಗರದ ಎಸ್‍ಆರ್‍ಎಸ್ ಹೆರಿಟೇಜ್ ಶಾಲೆಯ “ಅನಂತಕೃಷ್ಣ ಬೃಹತ್ ಸಭಾಂಗಣದಲ್ಲಿ” ಗುರುಪೂರ್ಣಿಮಾ ಆಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಂದುವರೆದು ಅವರು ಮಾತನಾಡುತ್ತಾ,
ಆಷಾಢ ಮಾಸದ ಹುಣ್ಣಿಮೆಯಂದು ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಗುರುವನ್ನು ದೇವರಂತೆ ಪೂಜಿಸುವ ಸಂಸ್ಕೃತಿ ನಮ್ಮ ದೇಶದಲ್ಲಿದೆ ಹಾಗಾಗಿ ಗುರುಪೂರ್ಣಿಮೆ ಬಹಳ ಮಹತ್ವದ ದಿನವಾಗಿದೆ ಎಂದು ಗುರುವಿನ ಮಹತ್ವ ತಿಳಿಸಿದರು.

ಕಾರ್ಯಕ್ರಮದ ಉಪಸ್ಥಿತಿಯನ್ನು ವಹಿಸಿದ ಎಸ್‍ಆರ್‍ಎಸ್ ಶಿಕ್ಷಣ ಸಮೂಹ ಸಂಸ್ಥೆಯ” ಮಾರ್ಗದರ್ಶಕರು ಶ್ರೀಮತಿ ಲಿಖಿತಾ ಅಮೋಘ್ ರವರು ಗಣಪತಿಪೂಜೆ, ವೇದವ್ಯಾಸರ ಪೂಜೆ ಮತ್ತು ಶಾರದ ಪೂಜೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಆಶೀರ್ವದಿಸುವುದರ ಮೂಲಕ ಕಾರ್ಯಕ್ರವನ್ನು ಕುರಿತು ಪ್ರಶಂಶಿಸಿದ್ದಾರೆ.

ಶಾಲೆಯ ಸಿ ಬಿ ಎಸ್ ಇ ವಿಭಾಗದ ಪ್ರಾಂಶುಪಾಲರಾದ ಶ್ರೀಯುತ ಪ್ರಭಾಕರ್ ಎಂ.ಎಸ್ ಕಾರ್ಯಕ್ರಮ ಕುರಿತು ಮಾತನಾಡಿ ಓಂ ಶ್ರೀ ಗುರುಭ್ಯೋ ನಮಃ, ಗುರುಬ್ರಹ್ಮ ಗುರುರ್ವಿಷ್ಣು ಗುರುರ್ದೇವೋ ಮಹೇಶ್ವರಃ ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ಸರ್ವರಿಗೂ ಗುರುಪೂರ್ಣಿಮೆಯ ಶುಭಾಶಯಗಳನ್ನು ಹೇಳುತ್ತಾ ಈ ದಿನ ಗುರು ಸೂತ್ರದ ಪ್ರಭಾವ ಇತರ ದಿನಗಳಿಗಿಂತ ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಗುರು ಅಂದರೆ ಅಜ್ಞಾನ ದೂರ ಮಾಡುವವರು ಎಂದರ್ಥ ಬಹುತೇಕ ಜನರು ಗುರುವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಪರಿಗಣಿಸುತ್ತಾರೆ. ಈ ದಿನ ಹಲವರು ತಮ್ಮ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಗುರು ಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೆ ಶೈಕ್ಷಣಿಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವ ಇದೆ ಎಂದು ನೆರೆದ ವಿದ್ಯಾರ್ಥಿಗಳಿಗೆ ತಿಳಿಸಿದರು.

ಶಾಲೆಯ ಐ ಸಿ ಎಸ್ ಇ ವಿಭಾಗದ ಪ್ರಾಂಶುಪಾಲರಾದ ಶ್ರೀಮತಿ ಅರ್ಪಿತ ಎಂ.ಎಸ್ ಕಾರ್ಯಕ್ರಮ ಕುರಿತು ಮಾತನಾಡಿ ಮಾನವನನ್ನು ಸೃಷ್ಠಿಸುವುದು ದೇವರ ಧರ್ಮ, ಮಾನವನನ್ನು ಉತ್ತಮನಾಗಿ ಪರಿವರಿವರ್ತಿಸುವುದು ಗುರುವಿನ ಧರ್ಮ ಎಂದು ಹೇಳುವುದರೊಂದಿಗೆ ಯಾವುದೇ ವಿದ್ಯೆ ಫಲಪ್ರದವಾಗಬೇಕಾದರೆ ಗುರುಕೃಪೆ, ಆಶೀರ್ವಾದ ಬೇಕೆ ಬೇಕು ಎಂದು ಗುರುವಿನ ಮಹತ್ವ ತಿಳಿಸಿದರು.

ಪ್ರತಿ ವರ್ಷ ಆಷಾಡ ಮಾಸದ ಶುಕ್ಲಪಕ್ಷದ ಹುಣ್ಣಿಮೆಯ ದಿನ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ  ಕಾರ್ಯಕ್ರಮದಲ್ಲಿ ಶಾಲೆಯ 3 ರಿಂದ 8ನೆ ತರಗತಿಯ ಸರಿಸುಮಾರು 800ಕ್ಕೂ ಹೆಚ್ಚು ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮಕ್ಕಳು ಉತ್ಸಾಹಭರಿತವಾಗಿ ತಮ್ಮ ಪೋಷಕರ ಪಾದಪೂಜೆ ಮಾಡುವ ಮೂಲಕ ಅವರ ಆಶೀರ್ವಾದಕ್ಕೆ ಪಾತ್ರರಾದರು.  ಮಕ್ಕಳು ತಮ್ಮ ಗುರುಗಳ ಆಶೀರ್ವಾದವನ್ನು ಪಡೆದರು. ಗುರುಗಳ ಸ್ಥಾನವು ದೇವರಿಗೆ ಸಮಾನ ಎಂದು ಹೇಳಲಾಗುತ್ತದೆ. ಜೀವನದ ನಿಜವಾದ ಮಾರ್ಗತೋರಿಸಲು ಗುರುಗಳು ಸಹಾಯ ಮಾಡುತ್ತಾರೆ. ಈ ದಿನ ಜನಿಸಿದ ವೇದವ್ಯಾಸರು ವೇದಗಳನ್ನು ರಚಿಸಿದ ಪವಿತ್ರ ದಿನವಾಗಿದ್ದು, ಈ ಮೂಲಕ  ಜಗತ್ತಿಗೆ ಜ್ಞಾನವನ್ನು ಹರಡಿದರು. ಈ ಕಾರ್ಯಕ್ರಮ ಆಚರಣೆಯ ಮೂಲಕ ಭಾರತೀಯ ಸಂಸ್ಕøತಿ, ಪರಂಪರೆ, ಸಂಸ್ಕಾರ ಮತ್ತು ಹಿಂದಿನ ಗುರುಕುಲ ಶಿಕ್ಷಣವನ್ನು ಮರುಕಳಿಸುವುದು ಹಾಗೂ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳಸುವುದಾಗಿದೆ. ಸಂಸ್ಕøತ ಶ್ಲೋಕಗಳನ್ನು ಮಕ್ಕಳಿಗೆ ಪಾರಾಯಣ ಮಾಡಿಸಿದರು.  ಕಾರ್ಯಕ್ರಮದಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳಿಗೆ ಆಶೀರ್ವದಿಸಿದರು. ಈ ದಿನದ ವಿಶೇಷತೆ ಬಗ್ಗೆ ಪೋಷಕರು ತಮ್ಮ ಅನುಭವವನ್ನು ಅಭಿಪ್ರಾಯಗಳೊಂದಿಗೆ  ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಶೈಕಣಿಕ ಸಂಯೋಜಕರಾದ ಶ್ರೀಮತಿ ಶಾಲಿನಿ, ಶ್ರೀಮತಿ ರೋಹಿನ ಟಿ. ಹಾಗೂ ಸಿಸಿಎ ಸಂಯೋಜಕರಾದ ಸುನೀಲ್ ಭಟ್, ಲುಬ್ನಾ ಕೌಸರ್ ಸಂಸ್ಕೃತ ಗುರುವೃಂದ, ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ಚಿತ್ರಕಲಾವಿಭಾಗದ ಶ್ರೀನಿವಾಸ್‍. ಟಿ, ಸ್ವಾಮಿ, ಮಾರುತಿ, ಬೋಧಕ ವರ್ಗ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!