ವಿಜಯವಾಣಿ ಸ್ಥಾನಿಕ ಸಂಪಾದಕ ನವೀನ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ ಸೇರಿ 8 ಮಂದಿಗೆ ಮಾಧ್ಯಮ ಪ್ರಶಸ್ತಿ

suddionenews
1 Min Read

 

ಸುದ್ದಿಒನ್,ದಾವಣಗೆರೆ, ಆ.21 : ವಿಜಯವಾಣಿಯ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ ಸೇರಿದಂತೆ ಎಂಟು ಮಂದಿಗೆ  ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ವತಿಯಿಂದ ನೀಡಲಾಗುವ ಮಾಧ್ಯಮ ಪ್ರಶಸ್ತಿಗೆ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.

ಪ್ರತಿವರ್ಷದಂತೆ ಈ ಬಾರಿಯೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಸದಸ್ಯರಿಗೆ ಮಾಧ್ಯಮ ಪ್ರಶಸ್ತಿ ನೀಡಲಾಗುವುದು. ಈ ಬಾರಿ ಪ್ರಶಸ್ತಿ ನೀಡಲು ಸಮಿತಿ ರಚಿಸಲಾಗಿತ್ತು. ಅದರಂತೆ ಸಮಿತಿಯು ಸೋಮವಾರ ಸಭೆ ನಡೆಸಿ ಎಂಟು ಜನ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರ ವಿವರ ಈ ಕೆಳಗಿನಂತಿದೆ.

1)ವಿಜಯವಾಣಿಯ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್,

2) ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ,

3) ಕನ್ನಡ ಭಾರತಿ ಸಂಪಾದಕ ಮಲ್ಲಿಕಾರ್ಜುನ ಕಬ್ಬೂರ್,

4) ವಾರ್ತಾ ವಿಹಾರ ಸುದ್ದಿ ಸಂಪಾದಕ ಎಂ.ವೈ. ಸತೀಶ್,

5) ದಾವಣಗೆರೆ ಕನ್ನಡಿಗ ಸಂಪಾದಕ ಆರ್. ರವಿ,

6) ಜನತಾವಾಣಿ ಹಿರಿಯ ವರದಿಗಾರ ಎನ್.ವಿ. ಶ್ರೀನಿವಾಸ,

7) ನ್ಯೂಸ್ 18 ಕನ್ನಡ ಸುದ್ದಿವಾಹಿನಿ ಕ್ಯಾಮರಾ ಮ್ಯಾನ್/ ಜಿಲ್ಲಾ ವರದಿಗಾರ ಎ.ಪಿ. ಸಂಜಯ್,

8) ರಾಜ್ ನ್ಯೂಸ್ ವರದಿಗಾರ ರಾಮಪ್ರಸಾದ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಆಯ್ಕೆಗೊಂಡವರಿಗೆ ಮಾಧ್ಯಮ ನಗದು ಮತ್ತು ಪ್ರಶಸ್ತಿಯನ್ನು ಗಣ್ಯರಿಂದ ಪ್ರದಾನ ಮಾಡಲಾಗುವುದು. ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ 27ರಂದು ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಕೆ. ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಸಿ. ವರದರಾಜ್, ಖಜಾಂಚಿ ಮಧು ನಾಗರಾಜ್ ಕುಂದುವಾಡ ತಿಳಿಸಿದ್ದಾರೆ.

 

 

Share This Article
Leave a Comment

Leave a Reply

Your email address will not be published. Required fields are marked *