Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈದ್ಯಕೀಯ ಕಾಲೇಜು: 18 ಗುತ್ತಿಗೆ ವೈದ್ಯರ ನೇಮಕ ಆಸ್ಪತ್ರೆ ಸೇವೆ ಹಾಗೂ ಬೋಧನೆಗೆ ಬಲ

---Advertisement---

ಚಿತ್ರದುರ್ಗ, ಅ.02 : ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 18 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಬೋಧಕರು ಹಾಗೂ ಪ್ರದರ್ಶಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಬಿ. ವೈ. ಯುವರಾಜ್ ಅಕ್ಟೋಬರ್ 01 ರಂದು  ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.

ಈ ನೂತನ ನೇಮಕಾತಿಯಿಂದ ಆಯ್ಕೆಯಾದ ವೈದ್ಯರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೇವೆ ಸಲ್ಲಿಸುವುದರ ಜೊತೆಗೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆಯನ್ನೂ ನಡೆಸಲಿದ್ದಾರೆ. ಅನಾಟಮಿ, ಬಯೋಕೆಮಿಸ್ಟ್ರಿ, ಮೈಕ್ರೋಬಯಾಲಜಿ, ಫಿಸಿಯಾಲಾಜಿ, ಪೆಥಾಲಜಿ, ಫಾರ್ಮಾಕಾಲಾಜಿ, ಕಮ್ಯೂನಿಟಿ ಮೆಡಿಸಿನ್, ಜನರಲ್ ಸರ್ಜರಿ, ಜನರಲ್ ಮೆಡಿಸಿನ್, ಓಬಿಜಿ, ಅರಿವಳಿಕೆ, ಮಕ್ಕಳ ತಜ್ಞರ ವಿಭಾಗ, ಇ.ಎನ್.ಟಿ. ಹಾಗೂ ಬ್ಲಡ್ ಬ್ಯಾಂಕ್ ವಿಭಾಗಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕಾರ್ಯನಿರ್ವಹಿಸಲಿದ್ದಾರೆ.

ಚಿತ್ರದುರ್ಗದ ಬೋಧಕ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉನ್ನತ ಮಟ್ಟದ ಹಾಗೂ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡಲು ಈ ನೇಮಕಾತಿ ಅತ್ಯಂತ ಅವಶ್ಯಕವಾಗಿದ್ದು, ಜಿಲ್ಲೆಯ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಕಾಲೇಜಿನ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now