ಉದಯಪುರಕ್ಕಿಂತ ವಾರದ ಮೊದಲೇ ಮತ್ತೊಂದು ಘಟನೆ ಬೆಳಕಿಗೆ ; ತೀವ್ರಗೊಂಡ ತನಿಖೆ ..!

suddionenews
1 Min Read

ಮುಂಬಯಿ : ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ. ಆರೋಪಿಗಳು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಹೊರತಾಗಿ ಇನ್ನೂ ಕೆಲವು ಪ್ರಮುಖ ಅಂಶಗಳನ್ನು ರಾಜಸ್ಥಾನ ಪೊಲೀಸರು ಬಹಿರಂಗಪಡಿಸಿದ್ದಾರೆ. ಆದರೆ, ಘಟನೆಗೂ ಮುನ್ನ ಮಹಾರಾಷ್ಟ್ರದಲ್ಲಿ ಇಂತಹದ್ದೇ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಚುರುಕುಗೊಂಡಿದೆ.

ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧಿ ವ್ಯಾಪಾರಿ ಉಮೇಶ್ ಕೊಲ್ಹೆ ಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕನ್ಹಯ್ಯಾ ಲಾಲ್‌ನಂತೆ ಅವರನ್ನೂ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೇರೆ ಯಾವುದೇ ವಿವರಗಳು ತಿಳಿದು ಬಂದಿಲ್ಲ. ಆದರೆ ಇದು ನೂಪುರ್ ಶರ್ಮಾ ಅವರ ಹೇಳಿಕೆಗೆ ಸಂಬಂಧಿಸಿದ ಘಟನೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.

ಜೂನ್ 21ರ ರಾತ್ರಿ ಅಂಗಡಿಯಿಂದ ವಾಪಸಾಗುತ್ತಿದ್ದ ಉಮೇಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಉಮೇಶ್ ಪುತ್ರ ಹಾಗೂ ಉಮೇಶ್ ಪತ್ನಿ ಪ್ರತ್ಯಕ್ಷದರ್ಶಿಗಳಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಘಟನೆ ನಡೆದ ಮೂರು ದಿನಗಳ ನಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ತೌಫಿಕ್, ಶೋಯೆಬ್ ಖಾನ್ ಮತ್ತು ಅತೀಕ್ ರಶೀದ್ ಅವರನ್ನು ಬಂಧಿಸಿದ್ದರು.

ಒಂದು ವೇಳೆ ಆ ಕೊಲೆ
ಕಳ್ಳತನಕ್ಕೆ ಸಂಬಂಧಿಸಿದಧಾಗಿದ್ದರೆ ಉಮೇಶ್ ಅವರಲ್ಲಿದ್ದ ಹಣವನ್ನು ಜೊತೆಗೆ ತೆಗೆದುಕೊಂಡು ಹೋಗಬೇಕಿತ್ತು. ಆದರೆ, ಆತನನ್ನು ಏಕೆ ಕೊಂದರು ಎಂಬುದು ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಿಜೆಪಿ ವಕ್ತಾರ ಶಿವರಾಯ್ ಕುಲಕರ್ಣಿ ಮತ್ತು ಅಮರಾವತಿ ಕಮಿಷನರ್ ಆರತಿ ಸಿಂಗ್ ಅವರನ್ನು ಭೇಟಿ ಮಾಡಿ,  ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೋಲ್ಹೆ ಅವರು ಕೆಲವು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅವುಗಳನ್ನು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಉದಯಪುರ ಘಟನೆ ನಡೆದಿದೆ. ಪ್ರಕರಣದ ತನಿಖೆಗೆ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *