Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ : ಏನೆಲ್ಲಾ ಚರ್ಚೆ ಮತ್ತು ನಿರ್ಧಾರ ಕೈಗೊಳ್ಳಲಾಯಿತು…! ಜಿಲ್ಲೆಯ ಜನರಿಗೆ ಮಹತ್ವದ ಮಾಹಿತಿ ಇಲ್ಲಿದೆ…!

Facebook
Twitter
Telegram
WhatsApp

 

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಆ. 13  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ವಿವಿಧ ಇಲಾಖೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ಜಿಲ್ಲೆಯ ಜನರಲ್ಲಿ ಶುದ್ಧ ಕುಡಿಯುವ ನೀರು ಮತ್ತು ವೈಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯ ಪಾಲನೆ ಕುರಿತು ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆ. 14 ರಿಂದ ಒಂದು ವಾರಗಳ ಕಾಲ “ಜನಜಾಗೃತಿ ಸಪ್ತಾಹ” ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ತಿಳಿಸಿದ್ದಾರೆ.

ಜಿಲ್ಲೆಯ ಜನರಲ್ಲಿ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಗೃಹ ಕಚೇರಿಯಲ್ಲಿ ಏರ್ಪಡಿಸಲಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಅಹಿತಕರ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಮಾಡಲು, ಜನರ ಗಮನವನ್ನು ಸೆಳೆದು ಅವರಲ್ಲಿ ಅರಿವು ಮೂಡಿಸುವುದು, ಸಾರ್ವಜನಿಕರಲ್ಲಿನ ಆತಂಕ ನಿವಾರಿಸುವುದು ಹಾಗೂ ಆರೋಗ್ಯ ಶಿಕ್ಷಣ ನೀಡುವುದು ಪರಿಣಾಮಕಾರಿ ಕ್ರಮವಾಗಿದೆ.  ಈ ನಿಟ್ಟಿನಲ್ಲಿ ಆ. 14 ರಿಂದ ಜನಜಾಗೃತಿ ಸಪ್ತಾಹ ಆಚರಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಆ. 14 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಓಬವ್ವ ವೃತ್ತದ ಬಳಿಯಿಂದಲೇ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದರು.  ಅಭಿಯಾನವು ಅಂದು ನಗರದ ಎಲ್ಲ 35 ವಾರ್ಡ್‍ಗಳಲ್ಲಿಯೂ ಏಕಕಾಲಕ್ಕೆ ಜರುಗಲಿದೆ.

ಜಿಲ್ಲೆಯ ಎಲ್ಲ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಸಾರ್ವಜನಿಕರಲ್ಲಿ ಶುದ್ಧ ಕುಡಿಯುವ ನೀರು ಬಳಕೆಯ ಬಗ್ಗೆ ಅರಿವು ಮೂಡಿಸುವುದು, ನೀರನ್ನು ಕಾಯಿಸಿ ಆರಿಸಿ ಕುಡಿಯುವುದು, ಆಹಾರ ಸೇವನೆಗೂ ಮುನ್ನ ಸಾಬೂನಿನಿಂದ ಸ್ವಚ್ಛವಾಗಿ ಕೈತೊಳೆದುಕೊಳ್ಳುವುದು, ಮನೆಯ ಸುತ್ತ ಮುತ್ತಲ ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವದ ಬಗ್ಗೆ ಅರಿವು ಮೂಡಿಸಲು ಬೃಹತ್ ಮಟ್ಟದಲ್ಲಿ ಒಂದು ವಾರ ಕಾಲ ಜನಜಾಗೃತಿ ಸಪ್ತಾಹ ಆಯೋಜಿಸಲು ನಿರ್ಧರಿಸಲಾಗಿದೆ ಎಂದರು.

ಆ. 14 ಕ್ಕೆ ಜಾಗೃತಿ ಸಪ್ತಾಹಕ್ಕೆ ಚಾಲನೆ :
ಜನಜಾಗೃತಿ ಸಪ್ತಾಹದ ಅಂಗವಾಗಿ ವಿವಿಧ ಬಗೆಯ ವೈವಿಧ್ಯಮಯ ಚಟುವಟಿಕೆಗಳನ್ನು ಒಂದು ವಾರಗಳ ಕಾಲ ಆಯೋಜಿಸಲಾಗುವುದು.

ಆಗಸ್ಟ್ 14 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಓಬವ್ವ ವೃತ್ತದಿಂದ ಜಾಥಾ ಏರ್ಪಡಿಸುವ ಮೂಲಕ ಈ ಜಾಗೃತಿ ಸಪ್ತಾಹಕ್ಕೆ ಚಾಲನೆ ನೀಡಲಾಗುವುದು.  ಈ ಸಂದರ್ಭದಲ್ಲಿ ನಗರದ ವ್ಯಾಪ್ತಿಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ ಸಹಾಯಕರು ಸೇರಿದಂತೆ ಸಾವಿರಾರು ಜನ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಜಾಥಾದಲ್ಲಿ ನೀರು ಹಾಗೂ ನೈರ್ಮಲ್ಯದ ಕುರಿತು ಸ್ಥಬ್ಧ ಚಿತ್ರಗಳು, ವಿವಿಧ ಬಗೆಯ ಕಲಾತಂಡಗಳು, ಜಾಗೃತಿ ಸಂದೇಶಗಳ ಭಿತ್ತಿಪತ್ರಗಳ ಪ್ರದರ್ಶನ, ಜಾಗೃತಿ ಘೋಷಣೆಗಳು, ಎಲ್‍ಇಡಿ ವಾಹನದ ಮೂಲಕ ಅರಿವು ಮೂಡಿಸುವ ವಿಡಿಯೋ ಚಿತ್ರಪ್ರದರ್ಶನ, ಜನರಲ್ಲಿ ಅರಿವು ಮೂಡಿಸುವ ಕರಪತ್ರಗಳ ಹಂಚಿಕೆ, ಬೀದಿ ನಾಟಕ ಪ್ರದರ್ಶನಗಳ ಆಯೋಜನೆ, ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ಆಯೋಜನೆ ಮೂಲಕ ಜನರ ಗಮನ ಸೆಳೆದು, ಅವರಲ್ಲಿ ಜಾಗೃತಿ ಮೂಡಿಸಲಾಗುವುದು.  ಓಬವ್ವ ವೃತ್ತದ ಬಳಿಯಿಂದ ಪ್ರಾರಂಭಗೊಂಡ ಜಾಥಾವು ನಗರದ 35 ವಾರ್ಡ್‍ಗಳಿಗೂ ವಿಭಜನೆಗೊಂಡು, ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಸಂಚರಿಸಿ, ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಜಿಲ್ಲೆಯಾದ್ಯಂತ ವೈವಿಧ್ಯಮಯ ಚಟುವಟಿಕೆಗಳ ಆಯೋಜನೆ : ಜನಜಾಗೃತಿ ಸಪ್ತಾಹ ಆಚರಣೆಯ ಅಂಗವಾಗಿ ಆಗಸ್ಟ್ 14 ರಿಂದ 20 ರವರೆಗೆ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಶಾಲಾ ಮಕ್ಕಳಿಂದ ಪ್ರಭಾತ ಫೇರಿ, ಕಾಲ್ನಡಿಗೆ ಜಾಥಾ, ಜಾಗೃತಿ ಸಂದೇಶಗಳ ಭಿತ್ತಿಪತ್ರಗಳ ಪ್ರದರ್ಶನ, ಕರಪತ್ರಗಳ ಹಂಚಿಕೆ, ಬೀದಿ ನಾಟಕಗಳ ಪ್ರದರ್ಶನ, ಕಸ ವಿಲೇವಾರಿ ವಾಹನಗಳಲ್ಲಿ ಧನಿವರ್ಧಕಗಳ ಮೂಲಕ ಜಾಗೃತಿ ಸಂದೇಶಗಳು, ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿ, ಗ್ರಾಮಸ್ಥರಲ್ಲಿ ನೀರು ಹಾಗೂ ನೈರ್ಮಲ್ಯದ ಮಹತ್ವ ಕುರಿತು ಮನವರಿಕೆ ಮಾಡಿಕೊಡುವುದು, ಸ್ತ್ರೀಶಕ್ತಿ ಮತ್ತು ಮಹಿಳಾ ಸ್ವ ಸಹಾಯ ಗುಂಪುಗಳ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು, ವೈಯಕ್ತಿಕ ಸ್ವಚ್ಛತೆ ಕುರಿತು ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯಿಂದ ಪ್ರಾತ್ಯಕ್ಷಿಕೆಗಳ ಆಯೋಜನೆ, ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಸಂದರ್ಭದಲ್ಲಿ ಮಕ್ಕಳಲ್ಲಿ ಕುಡಿಯುವ ನೀರು ಮತ್ತು ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ತಿಳುವಳಿಕೆ ನೀಡುವುದು, ಜಿಲ್ಲೆಯಾದ್ಯಂತ ಸಂಜೆಯ ವೇಳೆ ಪಂಜಿನ ಮೆರವಣಿಗೆ ಏರ್ಪಡಿಸಿ ಜನರ ಗಮನ ಸೆಳೆದು ಧ್ವನಿವರ್ಧಕ ಮೂಲಕ ಅವರಿಗೆ ಜಾಗೃತಿಯ ಸಂದೇಶ ನೀಡುವುದು ಹೀಗೆ ಇನ್ನೂ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.  ಇದಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳ ಅಗತ್ಯ ಸಹಕಾರ ನೀಡಿ, ಜನಜಾಗೃತಿ ಸಪ್ತಾಹವನ್ನು ಯಶಸ್ವಿಗೊಳಿಸಲು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್, ಡಿಡಿಪಿಐ ರವಿಶಂಕರ ರೆಡ್ಡಿ, ಬಿಇಒ ನಾಗಭೂಷಣ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!