Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ತರಳಬಾಳು ಶ್ರೀಗಳೊಂದಿಗೆ ಬೆಸ್ಕಾಂ ಅಧಿಕಾರಿಗಳು ಮತ್ತು ರೈತರ ಸಭೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಕೃಷಿಕರ ಸಮಸ್ಯೆಗಳನ್ನು ಕೆಪಿಟಿಸಿಎಲ್‌ ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ಮನವರಿಕೆ ಮಾಡುವ ಸಲುವಾಗಿ
ತರಳಬಾಳು ಬೃಹನ್ಮಠದ ಸದ್ಧರ್ಮ ನ್ಯಾಯಪೀಠದ ಸಭಾಂಗಣದಲ್ಲಿ ತರಳಬಾಳು ಶ್ರೀಗಳು ಬೆಸ್ಕಾಂ ಅಧಿಕಾರಿಗಳು ಮತ್ತು ರೈತರೊಂದಿಗೆ ಶನಿವಾರ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಿದ್ದಾರೆ.

ಕಳೆದ ಕೆಲವು ದಿನಗಳಿಂದ ಕೃಷಿಕರು ತೀವ್ರ ವಿದ್ಯುತ್‌ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಒಂದು ತಿಂಗಳ ಅವಧಿಯಲ್ಲಿಯೇ ಎರಡು ಬಾರಿ ಸಿರಿಗೆರೆಯ ವಿದ್ಯುತ್‌ ಪ್ರಸರಣ ಕೇಂದ್ರಕ್ಕೆ ರೈತರು ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದರು. ಬುಧವಾರ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 7 ರ ವರೆಗೆ ತೀವ್ರ ಪ್ರತಿಭಟನೆ ನಡೆಸಿದ ರೈತರು ಸಮೀಪದ ಮೈನಿಂಗ್‌ ಕಂಪನಿಗಳಿಗೆ ವಿದ್ಯುತ್‌ ನೀಡದೆ ಅದನ್ನು ರೈತರಿಗೆ ಬಳಕೆ ಮಾಡಬೇಕೆಂದು ಆಗ್ರಹಿಸಿದ್ದರು.

ಈ ವೇಳೆ ಕೆಲವು ರೈತ ಮುಖಂಡರು ತರಳಬಾಳು ಶ್ರೀಗಳ ಭೇಟಿ ಮಾಡಿ ರೈತರ ಸಮಸ್ಯೆಗಳನ್ನು ಪರಿಹರಿಸಲು ಮನವಿ ಸಲ್ಲಿಸಿದ್ದರು. ಅದಕ್ಕೆ ಸ್ಪಂದಿಸಿದ್ದ ಶನಿವಾರ ಸಭೆ ಕರೆದಿದ್ದಾರೆ.
ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಈ ಸಭೆ ನಡೆಯಲಿದೆ ಎಂದು ಬೃಹನ್ಮಠದ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment