ವೇತನ ಆಯೋಗ ಜಾರಿ ಕುರಿತು ಫೆಬ್ರವರಿ 21 ರಂದು ಚುನಾಯಿತ ಪ್ರತಿನಿಧಿಗಳ ಸಭೆ : ಸಿ.ಎಸ್. ಷಡಾಕ್ಷರಿ

suddionenews
2 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಫೆ.20) : ವೇತನ ಆಯೋಗ ಜಾರಿ ಕುರಿತು ಸರ್ಕಾರದ ಮೇಲೇ ಒತ್ತಡ ತರುವ ನಿಟ್ಟಿನಲ್ಲಿ ಫೆ.21 ರಂದು ನೌಕರರ ಸಂಘದ ರಾಜ್ಯದ 6000 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಸಂಧಾನ ಅಥವಾ ಹೋರಾಟದ ನಿರ್ಣಯ ಕೈಗೊಳ್ಳಲಾಗುವುದು.  ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆ ಯೋಜನೆ ಜಾರಿಗೊಳಿಸಬೇಕಿದೆ. ವೇತನ ಆಯೋಗ ಜಾರಿ, ನೂತನ ಪಿಂಚಣಿ ವ್ಯವಸ್ಥೆ ಬದಲಿ ಹಳೆಯ ಪಿಂಚಣಿ ಜಾರಿಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಎರಡು ದಿನಗಳ ಕಾಲ ಕೆಲಸದ ಒತ್ತಡದಿಂದ ಹೊರಬಂದು ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಇತರೆ ಇಲಾಖೆ ನೌಕರರೊಂದಿಗೆ ಬೆರೆಯಲು ಕ್ರೀಡಾಕೂಟದಲ್ಲಿ ಅವಕಾಶವಿದೆ.  ನೌಕರರ ಸಂಘದಿಂದ ಜಿಲ್ಲೆಯ 200  ಸರ್ಕಾರಿ ನೌಕರರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

ಪ್ರತಿ ವರ್ಷ  ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಅತಿ ಹೆಚ್ಚು ಅಂಕಗಳಿಸಿದ  10 ಸಾವಿರ ಸರ್ಕಾರ ನೌಕರರ ಮಕ್ಕಳಿಗೆ ಸಂಘದಿಂದ ರೂ.1 ಕೋಟಿ ಪ್ರೋತ್ಸಾಹ ಧನವನ್ನುನೀಡಲಾಗುತ್ತದೆ.

ಇದನ್ನು ರೂ.2 ಕೋಟಿಗೆ ಹೆಚ್ಚಿಸಲಾಗುವುದು ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಸ್ಪೋಟ್ರ್ಸ್ ಕಿಟ್ ಬ್ಯಾಗ ನೀಡಲಾಗುತ್ತದೆ. ಮುಂದಿನ ತಿಂಗಳು ತುಮಕೂರಿನಲ್ಲಿ ರಾಜ್ಯಮಟ್ಟ ನೌಕರರ ಕ್ರೀಡಾಕೂಟ ಆಯೋಜಿಸಲಾಗುವುದು.

ಜಿಲ್ಲಾ ಮಟ್ಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು, ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆನ್ ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು. ಇದರ ಲಿಂಕ್ ನೀಡಲಾಗುವುದು ಎಂದರು.

ವೃಂದಾ ಮತ್ತು ತಂಡದವರು ಕ್ರೀಡಾ ಜ್ಯೋತಿಯನ್ನು ಮೈದಾನಕ್ಕೆ ತಂದು ಗಣ್ಯರಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಜಿಲ್ಲೆಯ ಸರ್ಕಾರಿ ನೌಕರರ ಮಕ್ಕಳಿಗೆ ನಗದು ಪ್ರೋತ್ಸಾಹ ನೀಡಿ ಗೌರವಿಸಲಾಯಿತು.

Share This Article
Leave a Comment

Leave a Reply

Your email address will not be published. Required fields are marked *