Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾಧಿಕಾರಿಗಳ ನೂತನ ಕಟ್ಟಡ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ ಕುರಿತು ಸಭೆ

---Advertisement---

ಚಿತ್ರದುರ್ಗ. ಸೆ.10: ಬೆಂಗಳೂರಿನ ವಿಕಾಸ ಸೌಧದಲ್ಲಿ ಬುಧವಾರ ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚಿತ್ರದುರ್ಗ ಜಿಲ್ಲಾಧಿಕಾರಿಗಳ ನೂತನ ಕಟ್ಟಡವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಕುರಿತು ಚರ್ಚೆ ನಡೆಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ, ತಮ್ಮ ಅಭಿಪ್ರಾಯವನ್ನು ಮಂಡಿಸಿದ ನಂತರ, ಈ ಕುರಿತು ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು, ಕಂದಾಯ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಚಿವರ ಸಭೆಯಲ್ಲಿ ಕೈಗೊಳ್ಳಲು ನಿರ್ಧರಿಸಲಾಯಿತು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಸಭೆ: ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರೊಂದಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಮಹತ್ವದ ಸಭೆ ನಡೆಸಿದರು.

ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಗಳ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವುದು ಹಾಗೂ ಹಾಲಿ ಕಟ್ಟಡವನ್ನು ವೈದ್ಯಕೀಯ ಕಾಲೇಜಿನ ಬಳಕೆಗೆ ನೀಡುವ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ಈಗಾಗಲೇ ಕಂದಾಯ ಸಚಿವರೊಂದಿಗೆ ಚರ್ಚಿಸಿದಂತೆ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಹಾಗೂ ತಜ್ಞರ ತಂಡವನ್ನು ಸ್ಥಳ ವೀಕ್ಷಣೆಗೆ ಕಳುಹಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಟಾರಿಯ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ  ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ. ರಘುಮೂರ್ತಿ, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್,  ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಹಾಗೂ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...