ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ಭಾರೀ ಸದ್ದು ಮಾಡಿದ್ದ ಪ್ರಕರಣ ಅಂದ್ರೆ ಮೀಟೂ ಕೇಸ್. ನಟಿ ಶೃತಿ ಹರಿಹರನ್ ಈ ಬಗ್ಗೆ ಕಂಪ್ಲೈಂಟ್ ಕೊಟ್ಟಿದ್ದೆ ತಡ ಇಡೀ ರಾಜ್ಯ ತಿರುಗಿ ನೋಡುವಂತೆ ಆಗಿತ್ತು. ಅದಾದ ಬಳಿಕ ಸಾಕಷ್ಟು ಮೀಟೂ ಕೇಸ್ ಗಳು ದಾಖಲಾಗಿದ್ದವು. ಇದೀಗ ಅದೇ ಮೀಟೂ ಕೇಸ್ ಮತ್ತೆ ಗರಿಗೆದರಿದೆ.
ವಿಚಾರಣೆ ಮಾಡಲು ಪೊಲೀಸರು ಮತ್ತೆ ಶುರು ಮಾಡಿದ್ದಾರೆ. ನಟಿ ಶೃತಿ ಹರಿಹರನ್ ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟೀಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
2018ರಲ್ಲಿ ನಟಿ ಶೃತಿ ಹರಿಹರನ್, ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಕೇಸ್ ದಾಖಲು ಮಾಡಿದ್ದರು. ಚಿತ್ರೀಕರಣದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ದಾಖಲಿಸಿದ್ದರು. ದೂರಿನನ್ವಯ ಕಬ್ಬನ್ ಪಾರ್ಕ್ ಪೊಲೀಸರು ಕೇಸ್ ದಾಖಲಿಸಿದ್ದರು. ಆದರೆ ಯಾವುದೇ ಸಾಕ್ಷ್ಯಾಧಾರವಿಲ್ಲದೆ ಮೂರು ವರ್ಷಗಳ ಹಿಂದೆ ಬಿ ರಿಪೋರ್ಟ್ ಹಾಕಿದ್ದರು. ಇದೀಗ ಹಳೆ ಕೇಸ್ ಗಳನ್ನೆಲ್ಲಾ ಕ್ಲಿಯರ್ ಮಾಡುವಂತೆ ಗೃಹ ಸಚಿವರು ಸೂಚಿಸಿದ್ದು, ಅದರಲ್ಲಿ ಶೃತಿ ಹರಿಹರನ್ ಕೇಸ್ ಗೂ ಮತ್ತೆ ಜೀವ ಬಂದಿದೆ. ಪೊಲೀಸರು ನೋಟೀಸ್ ನೀಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…