Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇಕೆದಾಟು ಯೋಜನೆ : ತಮಿಳುನಾಡಿಗೆ ಭಾರೀ ಮುಖಭಂಗ

---Advertisement---

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರಕ್ಕೆ ತಮಿಳುನಾಡು ಕ್ಯಾತೆ ತೆಗೆಯೋದೇನು ಹೊಸದಲ್ಲ. ಯೋಜನೆ ಶುರು ಮಾಡಬೇಕು ಅಂದಾಗೆಲ್ಲಾ ಏನಾದರೊಂದು ಕಿತಾಪತಿಯನ್ನ ಮಾಡುತ್ತಲೆ ಇರುತ್ತದೆ. ಇದೀಗ ಮೇಕೆದಾಟು ಯೋಜನೆಯ ವಿಚಾರಕ್ಕೆ ತಮಿಳುನಾಡಿಗೆ ಮುಖಭಂಗ ಉಂಟಾಗಿದೆ ಕೋರ್ಟ್ ನಲ್ಲಿ.

 

ಮೇಕೆದಾಟು ಯೋಜನೆಹ ಡಿಪಿಆರ್ ವಿರೋಧಿಸಿ ತಮಿಳುನಾಡಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಇದರಿಂದ ರಾಜ್ಯದ ಯೋಜನೆಗೆ ಆರಂಭಿಕ ಸವಾಲು ನಿವಾರಣೆಯಾಗಿದೆ. ಮಳೆಗಾಲದಲ್ಲಿ ಕಾವೇರಿ ನದಿ ನೀರು ಅಪಾರ ಪ್ರಮಾಣದಲ್ಲಿ ವ್ಯರ್ಥವಾಗಿ ಸಮುದ್ರದ ಪಾಲಾಗುತ್ತಿತ್ತು. ಹೀಗಾಗಿ ಹೆಚ್ಚುವರಿ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲು ಯೋಜನೆ ರೂಪಿಸಿ. ಡಿಪಿಆರ್ ಅನ್ನು ಸಿದ್ಧ ಪಡಿಸಿತ್ತು. ಇದರ ಬೆನ್ನಲ್ಲೇ ಕಾವೇರಿ ವಿಚಾರದಲ್ಲಿ ಸದಾ ಕಾಲು ಕೆರೆದುಕೊಙಡು ಕ್ಯಾತೆ ತೆಗೆಯುವ ತಮಿಳುನಾಡು ಮೇಕೆದಾಟು ವಿಚಾರಕ್ಕೂ ಅಡ್ಡಗಾಲು ಹಾಕಿತ್ತು. ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್​​ ಮೆಟ್ಟಿಲೇರಿತ್ತು. ಆದ್ರೀಗ ತಮಿಳುನಾಡು ಸರ್ಕಾರಕ್ಕೆ ಸುಪ್ರಿಂಕೋರ್ಟ್​ನಲ್ಲಿ ಭಾರೀ ಮುಖಭಂಗವಾಗಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ಕರ್ನಾಟಕಕ್ಕೆ ದೊಡ್ಡ ಗೆಲುವು ಸಿಕ್ಕಿದೆ.

ಕರ್ನಾಟಕ ಮತ್ತು ತಮಿಳುನಾಡು ನಡುವೆ ಮೇಕೆದಾಟು ಯೋಜನೆ ವಿವಾದದಲ್ಲಿ ಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನಾ ವರದಿಯನ್ನು ಪ್ರಶ್ನಿಸಿ ತಮಿಳುನಾಡು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇದರ ವಿಚಾರಣೆ ನಡೆಸಿದ್ದು. ತಮಿಳುನಾಡಿನ ಮನವಿ ಅಪ್ರಸ್ತುತ ಎಂದು ಅಭಿಪ್ರಾಯಪಟ್ಟು, ಅರ್ಜಿಯನ್ನು ತಿರಸ್ಕಾರ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now