ಬೆಂಗಳೂರು: ಕಾಂಗ್ರೆಸ್ ನಾಯಕರು ಅರ್ಧಕ್ಕೆ ನಿಲ್ಲಿಸಿದ್ದ ಮೇಕೆದಾಟು ಯೋಜನೆಯನ್ನ ಮತ್ತೆ ಆರಂಭಿಸಿದ್ದಾರೆ. ಈ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಮಾತನಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪಾದಯಾತ್ರೆ ರಾಜಕೀಯ ಪ್ರೇರಿತ ಪಾದಯಾತ್ರೆ ಎಂದು ಕಿಡಿಕಾರಿದ್ದಾರೆ.
ನೆಲ, ಜಲ, ಭಾಷೆ ಅಂತ ಬಂದಾಗ ನಾಡಿನ ಜನರೆಲ್ಲಾ ಒಂದಾಗ್ತಾರೆ. ಇದನ್ನೇ ಕಾಂಗ್ರೆಸ್ ಬಂಡವಾಳವನ್ನಾಗಿ ಮಾಡಿಕೊಳ್ತಿದೆ. ನೀರಿಗೆ ರಾಜಕೀಯ ಲೇಪ ಬಳಿಯುತ್ತಿದೆ. ಕಾಂಗ್ರೆಸ್ ದೊಂಬರಾಟ ಮಾಡ್ತಿದೆ. 75 ವರ್ಷಗಳ ಕಾಲ ಆಡಳಿತ ನಡೆಸಿದಾಗ ಮೇಕೆದಾಟಿಗಾಗಿ ಏನೇನನ್ನು ಮಾಡಲಿಲ್ಲ. ಮೇಕೆದಾಟು ಅನುಷ್ಠಾನಕ್ಕೆ ನಮ್ಮ ರಾಜ್ಯ ಮತ್ತು ಕೇಂದ್ರ ಬದ್ಧವಾಗಿಯೇ ಇದೆ.
ಆದ್ರೆ ತಮಿಳುನಾಡಿನಲ್ಲಿ ಅವರದ್ದೇ ಸರ್ಕಾರವಿದೆ. ಡಿಎಂಕೆ ಜೊತೆ ಕಾಂಗ್ರೆಸ್ ಕೈಜೋಡಿಸಿದೆ. ಕಾಂಗ್ರೆಸ್ ಈ ಜನ್ಮದಲ್ಲಿ ಮೇಕೆದಾಟು ಯೋಜನೆ ಮಾಡಲು ಸಾಧ್ಯವೇ ಇಲ್ಲ. ಡಿಕೆ ಶಿವಕುಮಾರ್, ಡಿಕೆ ಸುರೇಶ್ ರಾಮನಗರ ಅಭಿವೃದ್ಧಿ ಮಾಡಿಲ್ಲ. ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಏನೂ ಕೆಲಸ ಮಾಡಿಲ್ಲ. ರಾಜಕೀಯ ಜನ್ಮ ಪಡೆದು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಅಂತ ಕಿಡಿಕಾರಿದ್ದಾರೆ.