ಮಾಹಿತಿ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, (ಜೂ.08) : ಸರಸ್ವತಿ ಕಾನೂನು ಮಹಾವಿದ್ಯಾಲಯ, ಚಿತ್ರದುರ್ಗ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿ ಜೂ. 9 ಮತ್ತು 10 ರಂದು ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.
ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಪಂದ್ಯಾವಳಿ ಉದ್ಗಾಟಿಸುವರು. ಸರಸ್ವತಿ ಕಾನೂನು ಮಹಾವಿದ್ಯಾಲಯದ ಅಧ್ಯಕ್ಷರಾದ ಹೆಚ್.ಹನುಮಂತಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ಫಾತ್ಯರಾಜನ್, ಸರಸ್ವತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಶ್ರೀಮತಿ ಡಿ.ಕೆ.ಶೀಲ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಖಾಲಿದ್‍ಖಾನ್ ಇವರುಗಳು ಆಗಮಿಸಲಿದ್ದಾರೆ. 10 ರಂದು ಸಂಜೆ 5-30 ಕ್ಕೆ ವಿಜೇತ ತಂಡಗಳಿಗೆ ಹೆಚ್.ಹನುಮಂತಪ್ಪ ಬಹುಮಾನ ವಿತರಿಸಲಿದ್ದಾರೆಂದು ಸರಸ್ವತಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ.ಡಾ.ಎಂ.ಎಸ್.ಸುಧಾದೇವಿ ತಿಳಿಸಿದ್ದಾರೆ.
ಮೂವತ್ತು ತಂಡಗಳ ಆಗಮನ ; ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ ಪುರುಷರ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂವತ್ತು ತಂಡಗಳು ಆಗಮಿಸಲಿದೆ.
ಬೆಂಗಳೂರು, ಮೈಸೂರು, ಧಾರವಾಡ, ಶಿವಮೊಗ್ಗ, ಬಳ್ಳಾರಿ, ತುಮಕೂರು, ರಾಯಚೂರು, ಬಿಜಾಪುರ, ಮಂಗಳೂರು, ಚಿತ್ರದುರ್ಗ ಜಿಲ್ಲೆಗಳ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಪಂದ್ಯಕ್ಕೆ ಸಂಬಂಧಿಸಿದಂತೆ ಇಪ್ಪತ್ತು ಅಫಿಶಿಯಲ್‍ಗೆ ಆಗಮಿಸಲಿದ್ದಾರೆ. ಜಯಶಾಲಿ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ನಾಲ್ಕನೆ ಬಹುಮಾನ ನೀಡಲಾಗುವುದೆಂದು ದೈಹಿಕ ಶಿಕ್ಷಕ ಮುರುಗೇಶ್ ತಿಳಿಸಿದ್ದಾರೆ.