ಬೆಂಗಳೂರು; ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ ಅಂದ್ರೆ ನಾಲ್ಕೈದು ಗಂಟೆಗೆ ಮಳೆ ಜೋರಾಗಿತ್ತು. ಸಂಜೆಯ ತನಕ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹೊರಗೆ ಹೋಗುವವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ. ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ತೆಗೆದುಕೊಂಡು ಹೋಗುವ ಅಭ್ಯಾಸ ಮಾಡಿಕೊಳ್ಳಿ.

ಇನ್ನು ಇಂದು ಬೆಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ, ವಿಜಯನಗರ ಭಾಗದಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ರಾತ್ರಿ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಅದರಲ್ಲೂ ಈ ಮಳೆಯ ಸಂದರ್ಭದಲ್ಲಿ ವಾಹನ ಸವಾರರು, ನಡೆದುಕೊಂಡು ಬರುವ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರಬೇಕು. ಯಾಕಂದ್ರೆ ಬಿಸಿಲಿನ ಬೇಗೆ ಮರ ಗಿಡಗಳೆಲ್ಲ ಒಣಗಿ ನಿಂತಿರುತ್ತವೆ. ಇದ್ದಕ್ಕಿದ್ದ ಹಾಗೆ ಮಳೆ ಬಂದ ಕಾರಣ, ಮರದ ಕೆಳಗೆ ಹೋಗಿ ನಿಲ್ಲಬೇಡಿ. ಮರದ ಕೊಂಬೆಗಳು ಬೀಳುವ ಸಾಧ್ಯತೆ ಇರುತ್ತದೆ.

ಇನ್ನು ಇದೇ ರೀತಿ ರಾಜ್ಯಾದ್ಯಂತ ಮೂರು ದಿನ ಅಂದ್ರೆ ಏಪ್ರಿಲ್ 17ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಗಾಳಿಯ ವೇಗವೂ ಗಂಟೆಗೆ 30-40 ಕಿಲೋಮೀಟರ್ ತಲುಪುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.

