ಅ.21 ರಿಂದ ಮಧ್ಯಾನ್ಹದ ಬಿಸಿಯೂಟ ಪುನಾರಂಭ

suddionenews
1 Min Read

ಬೆಂಗಳೂರು: ಕೊರೊನಾ ಮಹಾಮರಿ ಇಡೀ ಮನುಕುಲವನ್ನೇ ಸಾವಿನ ಬಾಗಿಲನ್ನ ತಟ್ಟುವಂತೆ ಮಾಡಿತ್ತು. ಸಾಂಕ್ರಾಮಿಕ ಕೋವಿಡ್ ಸೋಂಕಿನಿಂದಾಗಿ ಎಲ್ಲಾ ಕ್ಷೇತ್ರವನ್ನ ಲಾಕ್ ಮಾಡಲಾಗಿತ್ತು.

ಶಾಲಾ ಕಾಲೇಜು ಸೇರಿದಂತೆ
ಮಧ್ಯಾಹ್ನದ ಬಿಸಿಯೂಟ ಯೋಜನೆಗೂ ಬ್ರೇಕ್ ಹಾಕಿ, ದವಸ ಧಾನ್ಯಗಳನ್ನ ಮಾತ್ರ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿತ್ತು.

ಇನ್ನೂ 2020-21ನೇ ಸಾಲಿನಲ್ಲಿ ಶಾಲೆಗಳನ್ನು ತೆರೆಯದೆ 2020ರ ಮಾರ್ಚ್ 14 ರಿಂದ ಈವರೆಗೆ ಆಹಾರ ಭದ್ರತಾ ಕಾಯ್ದೆ 2013ರ ಅಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10ನೇ ತರಗತಿಯ ಅರ್ಹ ವಿದ್ಯಾರ್ಥಿ ಫಲಾನುಭವಿಗಳಿಗೆ ಮಧ್ಯಾನ್ಹದ ಬಿಸಿಯೂಟದ ಬದಲಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು

ಆದರೆ. ಇದೀಗ, ಕೋವಿಡ್ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಿಧಾನವಾಗಿ ಇಳಿಕೆಯಾಗುತ್ತಿದ್ದು, ಜತೆಗೆ ಪೂರ್ಣ ಪ್ರಮಾಣದಲ್ಲಿ 6-10ನೇ ತರಗತಿಗಳು ಆರಂಭವಾಗಿವೆ. ಇತ್ತ ನವೆಂಬರ್ 1 ರಿಂದ 1ರಿಂದ 5ನೇ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ಕೋರಿ ಸರ್ಕಾರಕ್ಕೆ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.‌

ಹೀಗಾಗಿ, 2021-22ನೇ ಸಾಲಿನಲ್ಲಿ PM-POSHAN Shakthi Nirman ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲೆಗಳಲ್ಲಿರುವ ಅಡುಗೆ ಕೇಂದ್ರಗಳಲ್ಲಿ ಬಿಸಿಯೂಟ ಸಿದ್ಧಪಡಿಸುವ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಬಿಸಿಯೂಟ ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಅಗತ್ಯ ಪೂರ್ವ ತಯಾರಿಗಾಗಿ ಕೋವಿಡ್ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಬಿಸಿಯೂಟ ಸಿದ್ಧಪಡಿಸುವ ಕೆಲಸ ಪುನಾರಂಭಿಸುವ ಪೂರ್ವದಲ್ಲಿಯೇ ಶಾಲೆಗಳಲ್ಲಿ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಅಡುಗೆ ಕೇಂದ್ರಗಳಲ್ಲಿ ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳುವುದು. ಶಾಲಾ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯವಿದೆ.
ಈ ಸಂಬಂಧ ಶಾಲಾ ಮುಖ್ಯಸ್ಥರು, ಅಡುಗೆ ಸಿಬ್ಬಂದಿ, ಎಸ್.ಡಿ.ಎಂ.ಸಿ. ಸದಸ್ಯರು ಮತ್ತು ತಾಯಂದಿರ ಸಮಿತಿಯ ಸದಸ್ಯರು, ಅಕ್ಷರ ದಾಸೋಹ ಮೇಲ್ವಿಚಾರಣಾ ಅಧಿಕಾರಿಗಳು ಹಾಗೂ ಸಿದ್ಧಪಡಿಸಿದ ಬಿಸಿಯೂಟ ವಿತರಿಸುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರಿಗೆ ಪೂರ್ವ ತಯಾರಿ ಕ್ರಮಗಳ ಬಗ್ಗೆ ಮಾರ್ಗಸೂಚಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *