Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದಾವಣಗೆರೆಯಲ್ಲಿ ಬಂಧಿತನಾದ ಶಂಕಿತನಿಗೆ ಉಗ್ರರ ಲಿಂಕ್..!?

---Advertisement---

 

ದಾವಣಗೆರೆ : ಬೆಂಗಳೂರಿನ ಸಿಸಿಬಿ ಪೊಲೀಸರು ಐದು ಜನ ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ್ದಾರೆ. ತೀವ್ರ ತನಿಖೆಯೂ ನಡೆಯುತ್ತಿದೆ. ಈ ಮಧ್ಯೆ ದಾವಣಗೆರೆಯಲ್ಲೂ ಶಂಕಿತನೊಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಆತನಿಗೆ ಬೆಂಗಳೂರಿನಲ್ಲಿ ಅರೆಸ್ಟ್ ಆದ ಉಗ್ರರ ನಂಟು ಇತ್ತು ಎಂದು ಹೇಳಲಾಗುತ್ತಿದೆ.

ಸಿಸಿಬಿ ಪೊಲೀಸರು ನಿನ್ನೆ ಮಧ್ಯರಾತ್ರಿ ದಾವಣಗೆರೆಯ ಆಜಾದ್ ನಗರದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 32 ವರ್ಷದ ಫಯಾಜ್ ನನ್ನು ಬಂಧಿಸಿದ್ದಾರೆ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಫಯಾಜ್ ಬೆಂಗಳೂರಿನಲ್ಲಿ ಬಂಧಿತವಾದ ಉಗ್ರರ ಸಂಪರ್ಕ ಇತ್ತು ಎನ್ನಲಾಗುತ್ತಿದೆ. ಸದ್ಯ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಉಗ್ರರಿಗೆ ಮನೆ ಬಾಡಿಗೆ ನೀಡಿದ್ದವರ ಪರಿಶೀಲನೆಯನ್ನು ಮಾಡಲಾಗುತ್ತಿದೆ. ಪೂರ್ವಾಪರ ತಿಳಿಯದೆ ಮನೆಯನ್ನು ಬಾಡಿಗೆ ಕೊಟ್ಟ ಮಾಲೀಕರ ಮೇಲೆ ಕ್ರಮ ತೆಗೆದುಕೊಳ್ಳಲು‌ ನಿರ್ಧಾರ ಮಾಡಲಾಗಿದೆ. ದಾಖಲೆ ಪಡೆದುಕೊಳ್ಳದೆ ಮನೆಯನ್ನು ಕೊಟ್ಟ ಹಿನ್ನೆಲೆ ಕೇಸ್ ದಾಖಲು ಮಾಡಲು ನಿರ್ಧಾರ ಮಾಡಲಾಗಿದೆ. ತನಿಖೆ ತೀವ್ರಗೊಂಡಿದ್ದು, ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...