ದಾವಣಗೆರೆ : ಬೆಂಗಳೂರಿನ ಸಿಸಿಬಿ ಪೊಲೀಸರು ಐದು ಜನ ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ್ದಾರೆ. ತೀವ್ರ ತನಿಖೆಯೂ ನಡೆಯುತ್ತಿದೆ. ಈ ಮಧ್ಯೆ ದಾವಣಗೆರೆಯಲ್ಲೂ ಶಂಕಿತನೊಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಆತನಿಗೆ ಬೆಂಗಳೂರಿನಲ್ಲಿ ಅರೆಸ್ಟ್ ಆದ ಉಗ್ರರ ನಂಟು ಇತ್ತು ಎಂದು ಹೇಳಲಾಗುತ್ತಿದೆ.
ಸಿಸಿಬಿ ಪೊಲೀಸರು ನಿನ್ನೆ ಮಧ್ಯರಾತ್ರಿ ದಾವಣಗೆರೆಯ ಆಜಾದ್ ನಗರದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 32 ವರ್ಷದ ಫಯಾಜ್ ನನ್ನು ಬಂಧಿಸಿದ್ದಾರೆ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಫಯಾಜ್ ಬೆಂಗಳೂರಿನಲ್ಲಿ ಬಂಧಿತವಾದ ಉಗ್ರರ ಸಂಪರ್ಕ ಇತ್ತು ಎನ್ನಲಾಗುತ್ತಿದೆ. ಸದ್ಯ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಉಗ್ರರಿಗೆ ಮನೆ ಬಾಡಿಗೆ ನೀಡಿದ್ದವರ ಪರಿಶೀಲನೆಯನ್ನು ಮಾಡಲಾಗುತ್ತಿದೆ. ಪೂರ್ವಾಪರ ತಿಳಿಯದೆ ಮನೆಯನ್ನು ಬಾಡಿಗೆ ಕೊಟ್ಟ ಮಾಲೀಕರ ಮೇಲೆ ಕ್ರಮ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ದಾಖಲೆ ಪಡೆದುಕೊಳ್ಳದೆ ಮನೆಯನ್ನು ಕೊಟ್ಟ ಹಿನ್ನೆಲೆ ಕೇಸ್ ದಾಖಲು ಮಾಡಲು ನಿರ್ಧಾರ ಮಾಡಲಾಗಿದೆ. ತನಿಖೆ ತೀವ್ರಗೊಂಡಿದ್ದು, ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…