ಪಿಎಸ್ಐ ಹಗರಣ ವಿಚಾರದಲ್ಲಿ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಸಚಿವ ಆರಗ ಜ್ಞಾನೇಂದ್ರ

1 Min Read

 

ಬೆಂಗಳೂರು: ಪಿಎಸ್ಐ ಪ್ರಕರಣದಲ್ಲಿ ಮತ್ತೊಬ್ಬ ಸಚಿವರ ಶಾಮೀಲು ಎಂಬ ಸಿದ್ದರಾಮಯ್ಯ ಆರೋಪ ವಿಚಾರವಾಗಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್ ಲಾಭ ಮಾಡಿಕೊಳ್ಳಲು ಹೊರಟಿದೆ. ಯಾರ್ಯಾರದ್ದೋ ಚಾರಿತ್ರ್ಯ ಹರಣ ಮಾಡ್ತಿದೆ ಕಾಂಗ್ರೆಸ್ ಎಂದಿದ್ದಾರೆ.

ಆ ಮೂಲಕ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಮುಂದಾಗಿದೆ. ಅವರ ಕಾಲದಲ್ಲಿ ಏನೇನಾಗಿದೆ ಅಂತ ಕಾಂಗ್ರೆಸ್ ನವ್ರು ಅರ್ಥ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಈದ್ಗಾ ಮೈದಾನದ ವಿಚಾರವಾಗಿ ಇವತ್ತು ಚಾಮರಾಜಪೇಟೆ ಬಂದ್ ನಡೆಸಲಾಗುತ್ತಿದ್ದು, ಈ ಬಗ್ಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಅವರು, ಬಂದ್ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *