Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಪ್ರತಿ ಗ್ರಾಮಕ್ಕೂ ಬಸ್ ಸೌಲಭ್ಯ : ಸಚಿವ ಬಿ.ಶ್ರೀರಾಮುಲು ಭರವಸೆ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.12) : ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೂ ಸಹ ಎರಡು ತಿಂಗಳೊಳಗೆ ಬಸ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಲೆಮಾರಿ ಜನಾಂಗದವರಿಗೆ ಮನೆ ಕಟ್ಟಿಕೊಳ್ಳಲು ಕಾರ್ಯಾದೇಶ ನೀಡುವ ಕಾರ್ಯಕ್ರಮದಲ್ಲಿ ಅಲೆಮಾರಿ ಜನಾಂಗದ ಫಲಾನುಭವಿಗಳಿಗೆ ವಸತಿಯೋಜನೆಯಡಿ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

ಮೊಳಕಾಲ್ಮುರು ಕ್ಷೇತ್ರದ ಅನೇಕ ಗ್ರಾಮಗಳಲ್ಲಿ ಸಂಚಾರಕ್ಕೆ ಬಸ್ ಸೌಕರ್ಯವಿಲ್ಲದೇ ಹಲವಾರು ಸಂಕಷ್ಟಗಳನ್ನು ಎದುರಿಸಿದ್ದರು. ಮೊಳಕಾಲ್ಮುರು ಕ್ಷೇತ್ರದ ಜನರಿಗೆ ಬಸ್ ಸೌಕರ್ಯ ಕಲ್ಪಿಸಬೇಕು ಎಂಬುದು ಹಿರಿಯ ನಾಗರಿಕರ ಹಾಗೂ ಪತ್ರಕರ್ತರ ಒತ್ತಾಸೆ ಆಗಿತ್ತು. ಈ ಹಿನ್ನಲೆಯಲ್ಲಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಎರಡು ತಿಂಗಳೊಳಗೆ ಬಸ್ ಸೌಕರ್ಯ ಕಲ್ಪಿಸಲಾಗುವುದು. ಕ್ಷೇತ್ರದ ಯಾವ ಗ್ರಾಮವೂ ಸಹ ಬಸ್ ಸೌಲಭ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಬೀದರ್ ನಿಂದ ಶ್ರೀರಂಗಪಟ್ಟಣಕ್ಕೆ ಹೋಗುವ ರಸ್ತೆ, ಶ್ರೀರಂಗಪಟ್ಟಣದಿಂದ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಿದ್ದು, ಮೊಳಕಾಲ್ಮುರು ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಯಧನ ನೀಡುವ ಸಲುವಾಗಿ ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ, ತಳಕು ಮತ್ತು ರಾಂಪುರ ಭಾಗದಲ್ಲಿ ಸುಮಾರು 95 ಸ್ತ್ರೀಶಕ್ತಿ ಗುಂಪುಗಳಿದ್ದು, ಸ್ತ್ರೀಶಕ್ತಿ ಗುಂಪುಗಳ ಏಳಿಗೆಗಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಸ್ತ್ರೀಶಕ್ತಿ ಗುಂಪುಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮೃತ್ ಯೋಜನೆಗೆ ಜಿಲ್ಲೆಯಲ್ಲಿ 22 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ನಲಗೇತಹಟ್ಟಿ, ರಾಂಪುರ, ಕೊಂಡ್ಲಹಳ್ಳಿ ಹಾಗೂ ದೊಡ್ಡ ಉಳ್ಳಾರ್ತಿ ಸೇರಿದಂತೆ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಅಮೃತ್ ಯೋಜನೆ ಆಯ್ಕೆ ಮಾಡಿಕೊಂಡಿದ್ದು, ಈ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ರೂ.5 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!