ಗದಗ: ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆ ಧ್ವಂಸ ಮಾಡಿದ ಎಂಇಎಸ್ ಪುಂಡರ ವಿರುದ್ಧ ಕನ್ನಡಪರ ಸಂಘಟನೆಯವರು ಸೇರಿದಂತೆ ಕಾಂಗ್ರೆಸ್ ಪಕ್ಷದವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ರೆ ಈ ಮಧ್ಯೆ ಸಚಿವ ಶ್ರೀರಾಮುಲು ಕಾಂಗ್ರೆಸ್ ಬಗ್ಗೆ ಹೊಸ ವಿಚಾರ ಹೊರ ಹಾಕಿದ್ದಾರೆ. ಈ ಗಲಾಟೆಯಲ್ಲಿ ಕಾಂಗ್ರೆಸಿಗರು ಭಾಗಿಯಾಗಿದ್ದಾರೆ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರು ಕಾಂಗ್ರೆಸ್ಸಿಗರು. ಗಲಭೆ ಮಾಡಿದವರಲ್ಲಿ ಕೆಲವು ಕಿಡಿಗೇಡಿಗಳು, ಕಾಂಗ್ರೆಸ್ ನ ಚೇಲಾಗಳಾಗಿದ್ದಾರೆ. ನನಗೆ ಗೊತ್ತಿರುವಂತೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿದ್ದಾರೆ. ಕರ್ನಾಟಕದಲ್ಲಿ ಇರುವ ಕೆಲವು ಪುಂಡರು ಕುಮ್ಮಕ್ಕು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಕಾಂಗ್ರೆಸ್, ಎಂಇಎಸ್ ಯಾರೇ ಇದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಗಲಾಟೆ ಸಂಪ್ರದಾಯವನ್ನ ಕನ್ನಡಿಗರು ಸಹಿಸಲ್ಲ.
ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಕುಮ್ಮಕ್ಕು ಕೊಡುತ್ತಿದ್ದಾರೆ. ಟ್ವೀಟ್ ಮಾಡುವ ಮೂಲಕ ಕುಮ್ಮಕ್ಕು ನೀಡುತ್ತಿದ್ದಾರೆ. ಗಲಾಟೆ ಮಾಡುವುದು ಎಂಇಎಸ್ ಮೈಗೂಡಿಸಿಕೊಂಡು ಬಿಟ್ಟಿದೆ. ಎಂಇಎಸ್ ಬ್ಯಾನ್ ಮಾಡೋದ್ರಿಂದ ಅನುಕೂಲವಾಗುತ್ತೆ ಅನ್ನೋದಾದ್ರೆ ಸಂಪೂರ್ಣ ಬೆಂಬಲವಿದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ವರದಿಯನ್ನ ಕೇಂದ್ರಕ್ಕೆ ನೀಡಿದ್ದೇವೆ ಎಂದಿದ್ದಾರೆ.