ದಾವಣಗೆರೆ: ಕಳೆದ ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. ಇದೀಗ ವರ್ಗಾವಣೆ ಪ್ರಕ್ರಿಯೆ ಶುರುವಾಗಿದೆ. ಜಿಲ್ಲೆಗೆ ಭೇಟಿ ನೀಡಿದ್ದ ಶಿಜ್ಷಣ ಸಚಿವ ನಾಗೇಶ್ ಅವರು, ವರ್ಗಾವಣೆ ಪ್ರಕ್ರಿಯೆ ಬಗ್ಗೆ ಮಾತನಾಡಿದ್ದು, ಶಿಕ್ಷಕರನ್ನ ನೇಮಕ ಮಾಡೋದು ಪಾಠ ಮಾಡೋದಕ್ಕೆ, ಸಂಸಾರ ನೋಡಲಿಕ್ಕಲ್ಲ ಎಂದಿದ್ದಾರೆ.
ವರ್ಗಾವಣೆ ಪ್ರಕ್ರಿಯೆ ಶುರುವಾಗಿರೋದು ಕೆಲ ಶಿಕ್ಷಕರಿಗೆ ಖುಷಿ ತಂದಿದೆ. ಆದ್ರೆ ಇನ್ನು ಕೆಲವರು ವೈಯಕ್ತಿಕ ಸಮಸ್ಯೆಯನ್ನೇ ಸಾಮೂಹಿಕ ಸಮಸ್ಯೆ ಎಂದು ಬಿಂಬಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಬರುವಾಗ ಜಿಲ್ಲಾವಾರು ಆಯ್ಕೆ ಗೊತ್ತಿರಲಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ಇಲ್ಲಿ ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವುದು ಮುಖ್ಯ. ಶಿಕ್ಷಕರನ್ನು ನೇಮಕ ಮಾಡಿರುವುದು ಪಾಠ ಮಾಡಲಿಕ್ಕೆ ವಿನಃ ಸಂಸಾರ ನೋಡಲಿಕ್ಕೆ ಅಲ್ಲ ಎಂದು ಖಾರಾವಾಗಿ ಉತ್ತರಿಸಿದ್ದಾರೆ.
ಇನ್ನು ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ್ದು, ಹೊಸ ಶಿಕ್ಷಣ ನೀತಿ ಬಗ್ಗೆ ಇಲ್ಲ ಸಲ್ಲದ ಆರೋಪ ಬೇಡ. ಹೊಸ ಶಿಕ್ಷಣ ನೀತಿ ಬಗ್ಗೆ ಓದಿಕೊಂಡು ಬನ್ನಿ ಚರ್ಚೆ ಮಾಡೋಣಾ. ಮಾತೃ ಭಾಷೆಗೆ ಆದ್ಯತೆ ಹೊಸ ಶಿಕ್ಷಣ ನೀತಿಯಲ್ಲಿ ಇದೆ ಎಂದು ಸಚಿವ ನಾಗೇಶ್ ಹೇಳಿದ್ದಾರೆ.