
ಗದಗ: ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಕೂಡ ಶುರುವಾಗುತ್ತೆ. ಈಗಾಗಲೇ ಬಿಜೆಪಿ ನಾಯಕರು ಕಾಂಗ್ರೆಸ್ ಗೆ, ಜೆಡಿಎಸ್ ನಾಯಕರು ಬಿಜೆಪಿಗೆ ಸೇರಿದ್ದಾರೆ. ಇದರ ಜೊತೆಗೆ ಬಾಂಬೆ ಟೀಂ ಕೂಡ ಮತ್ತೆ ಕಾಂಗ್ರೆಸ್ ಪಕ್ಷ ಸೇರಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತ ಮಾತುಗಳನ್ನು ಆಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಕೆಸಿ ನಾರಾಯಣ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ನಮ್ಮ ಪಕ್ಷದಿಂದ ಇಬ್ಬರು ಹೋದ್ರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಇಪ್ಪತ್ತು ಜನ ಬರುವವರು ಇದ್ದಾರೆ. ಸ್ವಲ್ಪ ದಿನ ಕಾದು ನೋಡಿ ಎಂದು ಕುತೂಹಲ ಮೂಡಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಅವರು ನಮ್ಮ ಪಕ್ಷಕ್ಕೆ ಬಂದರೂ ಸೇರಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ನಿರುದ್ಯೋಗಿಗಳು. ಅವರಿಗೆ ಕೆಲಸವಿಲ್ಲ. ಆದ್ರೆ ನನಗೆ ಕೆಲಸವಿದೆ ಎಂದಿದ್ದಾರೆ.

GIPHY App Key not set. Please check settings