ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 : ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಅಕ್ಟೋಬರ್ ತಿಂಗಳ ಒಳಗಾಗಿ 6500 ಕ್ಕೂ ಹೆಚ್ಚು ಪೌತಿ ಖಾತೆಗಳನ್ನು ಆಂದೋಲನ ರೀತಿ ಕೈಗೊಂಡು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂದಿಸಿದ ಅಹವಾಲು ಅರ್ಜಿ ಸ್ವೀಕರಿಸಲು ತಂತ್ರಾಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಸ್ಥಳದಲ್ಲಿ ನಾಲ್ಕು ಕೌಂಟರ್ ಗಳನ್ನು ತೆರೆದು ಅರ್ಜಿ ಸ್ವೀಕೃತಿಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ತರೆಯಲಾದ ವಸ್ತು ಪ್ರದರ್ಶನ ಮಳಿಗೆಗಳನ್ನು ಸಚಿವ ಡಿ.ಸುಧಾಕರ್ ಉದ್ಘಾಟನೆ ಮಾಡಿದರು.
ಡಿ.ಎಮ್.ಎಫ್, ಜಿಲ್ಲಾ ಪಂಚಾಯತಿ ಅನುದಾನದಡಿ 8 ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ, ಶೇಕಡಾ ನೂರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಶಾಲೆಗಳಿಗೆ ಅಭಿನಂದನಾ ಪತ್ರ, ಕಾರ್ಮಿಕ ಇಲಾಖೆ ವತಿಯಿಂದ ನೊಂದಣಿ ಕಾರ್ಡ್, ಲ್ಯಾಪ್ ಟಾಪ್, ಅಂತರ್ಜಾತಿ ವಿವಾಹವಾದವರಿಗೆ ಸಮಾಜ ಕಲ್ಯಾಣ ಇಲಾಖೆ ಬಾಂಡ್, ಕಂದಾಯ ಇಲಾಖೆ 94ಸಿ ಹಕ್ಕು ಪತ್ರ, ವಿವಿಧ ಪಿಂಚಣಿ ಆದೇಶ ಪತ್ರಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಕನ್ಯ ಸಮೃದ್ಧಿ ಬಾಂಡ್‌ಗಳನ್ನು ಸಚಿವ ಡಿ.ಸುಧಾಕರ್ ಫಲಾನುಭವಿಗಳಿಗೆ ವಿತರಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿ.ಪಂ.ಸಿಇಓ ಎಸ್.ಜಿ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಆರ್.ಕಾರ್ತೀಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಡಾ.ರಂಗನಾಥ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಹಿರಿಯೂರು ತಹಶಿಲ್ದಾರರ ರಾಜೇಶ್ ಕುಮಾರ್ ಸೇರಿದಂತೆ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತರಿದ್ದರು.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…