Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಡಿ. ಸುಧಾಕರ್ ನಿಧನ: ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 11 : ರಾಜ್ಯದ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಹಿರಿಯೂರು ಕ್ಷೇತ್ರದ ಶಾಸಕರಾದ ಡಿ. ಸುಧಾಕರ್ (63 ವರ್ಷ) ಅವರ ನಿಧನದ ಹಿನ್ನೆಲೆಯಲ್ಲಿ, ಸರ್ಕಾರವು ಮೃತರ ಗೌರವಾರ್ಥ ಇಂದು (ಸೋಮವಾರ) ಚಿತ್ರದುರ್ಗ ಜಿಲ್ಲೆಯಾದ್ಯಂತ ರಜೆ ಘೋಷಿಸಿದೆ.

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಸುಧಾಕರ್ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆ ಮತ್ತು ಕಾಲೇಜುಗಳಿಗೆ ಮೇ 11ರ ಸೋಮವಾರ ರಜೆ ನೀಡಲಾಗಿದೆ.ಮೇ 10 ರಿಂದ 12 ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಧಿಕೃತ ಶೋಕ ಆಚರಿಸಲು ಸರ್ಕಾರ ಆದೇಶಿಸಿದೆ.

ಸಚಿವರ ನಿಧನಕ್ಕೆ ಸಂತಾಪ ಸೂಚಿಸಿ ರಾಜ್ಯ ಸರ್ಕಾರವು ವಿಶೇಷ ಅಧಿಸೂಚನೆಯನ್ನು ಹೊರಡಿಸಿದ್ದು, ಶೋಕಾಚರಣೆಯ ಅವಧಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು.ಈ ಮೂರು ದಿನಗಳಲ್ಲಿ ಯಾವುದೇ ಸರ್ಕಾರಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು, ಮೇ 10ರ ಭಾನುವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು. ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದ ಅವರ ನಿಧನಕ್ಕೆ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿ ಹಾಗೂ ಗಣ್ಯರು ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ಅಂತ್ಯಕ್ರಿಯೆ ಪಾಲ್ಗೊಳ್ಳಲಿದ್ದಾರೆ. ಅಗಲಿದ ನಾಯಕನಿಗೆ ಗೌರವ ಸಲ್ಲಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಸಿದ್ಧತೆಗಳು ಪೂರ್ಣಗೊಂಡಿವೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ಸುಗಮವಾಗಿ ದರ್ಶನ ಪಡೆಯಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವು ಬಿಗಿ ಬಂದೋಬಸ್ತ್ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now