Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಡಿ. ಸುಧಾಕರ್ ಅನಾರೋಗ್ಯ : ಐಸಿಯುನಲ್ಲಿ ಚಿಕಿತ್ಸೆ

---Advertisement---

 

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಸದ್ಯ ಸಚಿವರನ್ನು ಎಕ್ಮೋ (ECMO) ಲೈಫ್ ಸಪೋರ್ಟ್‌ನಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಶಸ್ತ್ರಚಿಕಿತ್ಸೆಯ ನಂತರ ಹಠಾತ್ತನೆ ಶ್ವಾಸಕೋಶದ ಸೋಂಕಿಗೆ ಒಳಗಾದರು.

ಮೊದಲಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಆರೋಗ್ಯದಲ್ಲಿ ಸುಧಾರಣೆ ಕಾಣಿಸದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದಲ್ಲಿ ಪರಿಣಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಸಚಿವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಶ್ವಾಸಕೋಶ ಕಸಿ (Lung Transplantation) ಮಾಡುವ ಸಾಧ್ಯತೆಗಳನ್ನೂ ಪರಿಶೀಲಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಚಿಕಿತ್ಸೆಗೂ ಸಚಿವರ ದೇಹವು ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲವೆಂದು ಹೇಳಲಾಗಿದ್ದು, ಮುಂದಿನ ಕೆಲ ದಿನಗಳು ಅತ್ಯಂತ ನಿರ್ಣಾಯಕವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಚಿವರ ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯ ವಲಯದಲ್ಲೂ ಆತಂಕ ವ್ಯಕ್ತವಾಗಿದ್ದು, ಹಲವರು ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದ್ದಾರೆ.

ಆಸ್ಪತ್ರೆ ನೀಡಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಸಚಿವರು ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಹೇಳಿಕೆಯಂತೆ, ಅವರು ಚಿಕಿತ್ಸೆಗಾಗಿಯೂ ಸ್ಪಂದಿಸುತ್ತಿದ್ದು, ಸ್ಥಿತಿ ಮೇಲ್ವಿಚಾರಣೆಯಲ್ಲಿದೆ.

ಏಪ್ರಿಲ್ 23, ರಾತ್ರಿ 11:45ಕ್ಕೆ ಬಿಡುಗಡೆಗೊಂಡ ಪ್ರಕಟಣೆಯಲ್ಲಿ ವೈದ್ಯಕೀಯ ನಿರ್ದೇಶಕ ಡಾ. ಚಿನ್ನದುರೈ ಮಾಹಿತಿ ನೀಡಿ, “ಸಚಿವ ಡಿ. ಸುಧಾಕರ್ ಅವರಿಗೆ ಶ್ವಾಸಕೋಶದ ಸೋಂಕು ಕಂಡುಬಂದಿದ್ದು, ಕಿಮ್ಸ್ ಎಲೆಕ್ಟ್ರಾನಿಕ್ ಸಿಟಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ಮೊಣಕಾಲಿನ ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಚಿವರು, ಬಳಿಕ ಉಂಟಾದ ಸೋಂಕಿನ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಸದ್ಯ ಅವರ ಆರೋಗ್ಯದ ಮೇಲೆ ಪರಿಣಿತ ವೈದ್ಯರ ತಂಡ ನಿಗಾ ವಹಿಸಿದ್ದು, ಅಗತ್ಯವಿದ್ದಲ್ಲಿ ಮುಂದಿನ ಮಟ್ಟದ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ರಾಜಕೀಯ ವಲಯದಲ್ಲೂ ಸಚಿವರ ಆರೋಗ್ಯ ವಿಚಾರ ಚರ್ಚೆಯಾಗುತ್ತಿದ್ದು, ಶೀಘ್ರ ಚೇತರಿಸಿಕೊಳ್ಳಲಿ ಎಂಬ ಆಶಯ ವ್ಯಕ್ತವಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...