in

ಕೋವಿಡ್ ಹೆಚ್ಚಳಕ್ಕೆ ಪಾದಯಾತ್ರೆಯೂ ಕಾರಣ : ಸಚಿವ ಸುಧಾಕರ್

suddione whatsapp group join

ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಲು ನಿರಂತರ ಪ್ರಯತ್ನವನ್ನು ಸರ್ಕಾರ ಮಾಡಿದೆ. ಯಾವುದೇ ಲಾಠಿಚಾರ್ಜ್, ಬಂಧನಕ್ಕೆ ಅವಕಾಶ ನೀಡದೆ ಸರ್ಕಾರ ಸಮಚಿತ್ತದಿಂದ ಪರಿಸ್ಥಿತಿ ನಿಭಾಯಿಸಿದೆ. ಕೋವಿಡ್ ಪ್ರಕರಣ ಹೆಚ್ಚಲು ಪಾದಯಾತ್ರೆ ನಡೆಸಿದವರು ಕೂಡ ಕಾರಣರು ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜನರ ಆರೋಗ್ಯ ಕಾಪಾಡಲು ಕಾಂಗ್ರೆಸ್ ಪಾದಯಾತ್ರೆ ಸ್ಥಗಿತಗೊಳಿಸಿರುವುದಕ್ಕೆ ಅಭಿನಂದನೆಗಳು. ಅನೇಕ ಅಮಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಎಷ್ಟು ಮಂದಿಗೆ ಸೋಂಕು ಬಂದಿದೆ ಎಂದು ಗೊತ್ತಿಲ್ಲ. ಸರ್ಕಾರ ಪ್ರತಿಭಟನೆಯನ್ನು ತಡೆಯಲಿಲ್ಲ. ಆದರೆ ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಕೋರಲಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಕೋವಿಡ್ ನಿರ್ವಹಣೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಅಧಿಕಾರಿಗಳ ಸ್ಪೂರ್ತಿ ಕಳೆಯುವ ಕೆಲಸ ಎಂದರು.

ಸಿಎಂ ಬಸವರಾಜ ಬೊಮ್ಮಾಯಿಯವರು ನೀರಾವರಿ ಕ್ಷೇತ್ರದಲ್ಲಿ ಆಳ ಜ್ಞಾನ ಹೊಂದಿದ್ದು, ಯಾವ ರೀತಿ ಹೋರಾಟ ಮಾಡಬೇಕೆಂಬುದು ತಿಳಿದಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರದೊಂದಿಗೆ ಕೈ ಜೋಡಿಸಬೇಕು. ಉತ್ತರ ಪ್ರದೇಶದ ಕಾಂಗ್ರೆಸ್ ನಿಗದಿ ಮಾಡಿದ್ದ ಧರಣಿಯನ್ನು ಮುಂದೂಡಿದೆ. ಅದೇ ರೀತಿ ಇಲ್ಲೂ ಕಾಂಗ್ರೆಸ್ ಮಾಡಬೇಕಿತ್ತು ಎಂದರು.

ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿ, ನೋಟಿಸ್ ಜಾರಿ ಮಾಡಿ ಕ್ರಮ ವಹಿಸಿದೆ. ಬಂಧಿಸುವುದು, ಲಾಠಿ ಚಾರ್ಜ್ ಮಾಡುವುದು ದೊಡ್ಡ ವಿಚಾರವಲ್ಲ. ಆದರೆ ಇಂದಿನ ಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ. ಇದು ಅಂತರರಾಜ್ಯದ ಸಮಸ್ಯೆಯಾಗಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೋಗಿದೆ. ಡಿಎಂಕೆ ಪಕ್ಷ ಯಾರೊಂದಿಗೆ ಸರ್ಕಾರ ರಚಿಸಿದೆ ಎಂದು ನೋಡಬೇಕು. ಅವರ ಹೈಕಮಾಂಡ್ ಜೊತೆಯೇ ಅವರು ಚರ್ಚೆ ಮಾಡಬಹುದಿತ್ತು ಎಂದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ 13/01/2022 ತಾಲ್ಲೂಕುವಾರು ಕರೋನ ವರದಿ

ಯುಪಿ ಎಲೆಕ್ಷನ್ : ಮಹಿಳೆಯರಿಗೆ ಆದ್ಯತೆ ನೀಡಿದ ಕಾಂಗ್ರೆಸ್..!