ಚಿತ್ರದುರ್ಗ, ಅ.05: ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇದೇ ಅಕ್ಟೋಬರ್ 6ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗ ಜಿಲ್ಲೆಯ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡುವರು. ನಂತರ ಬೆಳಿಗ್ಗೆ 10ಕ್ಕೆ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.
ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇದೇ ಅಕ್ಟೋಬರ್ 6ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಜೊತೆಯಲ್ಲಿ ಸಚಿವರು ಅಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹಿರಿಯೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‍ಗೆ ಆಗಮಿಸುವರು.
ಮಧ್ಯಾಹ್ನ 12.10 ಗಂಟೆಗೆ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂಗೆ ತೆರಳಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಆಯೋಜಿಸಿರುವ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3.10ಕ್ಕೆ ಮುಖ್ಯಮಂತ್ರಿಗಳ ಜೊತೆಯಲ್ಲಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












