Connect with us

Hi, what are you looking for?

ಪ್ರಮುಖ ಸುದ್ದಿ

ಸಿಎಂ ಬಿಎಸ್ ವೈ ವಿರುದ್ಧ ಸಚಿವ ಈಶ್ವರಪ್ಪ ಸ್ವಹಿತಾಸಕ್ತಿಗಾಗಿ ದೂರು ನೀಡಿದ್ದಾರಷ್ಟೆ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ವ್ಯಂಗ್ಯ

ದಾವಣಗೆರೆ: ಸಚಿವ ಈಶ್ವರಪ್ಪ ಸಿಎಂ ವಿರುದ್ಧ ದೂರು ನೀಡಿರುವುದು ಸ್ವಹಿತಾಸಕ್ತಿಗಾಗಿ ಹೊರತು ರಾಜ್ಯದ ಜನರ ಹಿತಕ್ಕಾಗಿ ಅಲ್ಲ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ವಿಶ್ಲೇಷಿಸಿದ್ದಾರೆ.

ಸಚಿವ ಈಶ್ವರಪ್ಪ ಅವರು ಸಿಎಂ ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಾರೆಂದು ರಾಜ್ಯಪಾಲರಿಗೆ ಪ್ರಧಾನಿಗೆ ದೂರು ನೀಡಿದ್ದು, ಇದರ ಹಿಂದೆ ಇಬ್ಬರು ಸೇರಿ ಲೂಟಿ ಹೊಡೆಯುತ್ತಿದ್ದು ಅದಕ್ಕೆ ಧಕ್ಕೆ ಬರಬಾರದೆನ್ನುವ ಕಾರಣಕ್ಕೆ ಎಂದು ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಏ.3 ರಂದು ಬೆಳಿಗ್ಗೆ 10:30 ಕ್ಕೆ ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯಕಾರಿ ಸಭೆ ನಡೆಯಲಿದೆ.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ್ರು ಹಾಗೂ ವಿಭಾಗದ ಎಲ್ಲಾ ಜಿಲ್ಲಾಧ್ಯಕ್ಷರು ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮುಖ್ಯಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್, ಸಯ್ಯದ್ ಸೈಫುಲ್ಲಾ, ಕೆಪಸಿಸಿ ಕಾರ್ಮಿಕ ವಿಭಾಗದ ಜಿಲ್ಲಾ ಉಸ್ತುವಾರಿ ಡಾ. ಸುಜಾತ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಖಾಲೀದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಸರ್ಕಾರ ಕಾರ್ಮಿಕರ ಬಗ್ಗೆ ತಳೆದಿರುವ ವಿರೋಧಿ ಧೋರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಅಸಂಘಟಿತ ಕಾರ್ಮಿಕರು ಭದ್ರತೆ ಇಲ್ಲದೆ ಜೀವನ ಸಾಗಿಸುವುದು ಕಷ್ಟಕರವಾಗಿದ್ದು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕಾರ್ಮಿಕರ ಬಗ್ಗೆ ಅಮಾನವೀಯ ನೀತಿಗಳನ್ನು ಜಾರಿಗೆ ತರುತ್ತಿವೆ.ಬಂಡವಾಳ ಷಾಹಿಗಳ ಕಾನೂನು ರೂಪಿಸುತ್ತಿವೆ ಎಂದು ಹರಿಹಾಯ್ದರು.

ಲಾಕ್ಡೌನ್ ಸಂದರ್ಭದಲ್ಲಿ ಸವಿತಾ ಸಮಾಜ, ಮಡಿವಾಳ ಸಮಾಜ, ಕಟ್ಟಡ ಕಾರ್ಮಿಕರು ವಾಹನ ಚಾಲಕರು ಇವರುಗಳಿಗೆ ಸರ್ಕಾರ ಭರವಸೆ ನೀಡಿದಂತೆ ಸಮರ್ಪಕ ಪರಿಹಾರವನ್ನು ನೀಡಲಿಲ್ಲ. ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ 40 ಸಾವಿರ ಕೋಟಿ ಹಣವಿದೆ. ಇದನ್ನು ಕಾರ್ಮಿಕರ ಕಲ್ಯಾಣಕ್ಕೆ ವಿನಿಯೋಗಿಸಿಲ್ಲ. ಕೋವಿಡ್ ಎನ್ನುವುದು ರಾಜ್ಯಸರ್ಕಾರಕ್ಕೆ ಹಣ ಲೂಟಿ ಮಾಡಲು ಪರವಾನಿಗೆ ಸಿಕ್ಕಂತಾಗಿದೆ ಎಂದು ಕುಟುಕಿದರು.

ರಾಜ್ಯ ಮತ್ತು ಜಿಲ್ಲೆಗಳಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ ಯಾವುದಕ್ಕೆ ಎಷ್ಟು ಹಣ ಖರ್ಚು ಮಾಡಿದ್ದಾರೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಡಾ. ಸುಜಾತ, ಟಿ.ವೈ. ಕುಮಾರ್, ಆಸೀಫ್ ಅಲಿ, ಎಂ.ಎಸ್. ವೀರಭದ್ರಪ್ಪ, ಗೋಪಾಲ್ ದೇವರಮನೆ, ಕೆ.ಎಂ. ಮಂಜುನಾಥ್ ಇತರರು ಗೋಷ್ಠಿಯಲ್ಲಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!