ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.15 : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಸಚಿವ ಜಮೀರ್ ಅಹಮದ್ ಅವರು ಇದ್ದಕ್ಕಿದ್ದಂತೆ ಅನಾರೋಗ್ಯದಿಂದ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ನಗರಕ್ಕೆ ಆಗಮಿಸಿದ್ದ ಸಚಿವರಿಗೆ ಎದೆ ನೋವು ಮತ್ತು ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಅವರು ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೈದ್ಯರು ತಕ್ಷಣವೇ ಇಸಿಜಿ, ಇಕೋ ಹಾಗೂ ರಕ್ತ ಪರೀಕ್ಷೆ ಮಾಡಿದ್ದು, ವರದಿಯಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡು ಬಂದಿಲ್ಲ. ಇಸಿಜಿ, ಇಕೋ ನಾರ್ಮಲ್ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















