Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 02 ರಂದು ಚಿತ್ರದುರ್ಗಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹೆಬ್ಬಾಳ್ಕರ್
---Advertisement---

ಚಿತ್ರದುರ್ಗ. ಆ.31 : ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸೆ. 02 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, 10.30 ಗಂಟೆಗೆ ಚಿತ್ರದುರ್ಗ ನಗರದ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸುವರು.  ಬೆ. 11 ಗಂಟೆಗೆ ನಗರದ ಒನಕೆ ಓಬವ್ವ ಸರ್ಕಲ್‍ನಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡುವರು.  ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು, ಬಳಿಕ ಇಲಾಖೆಯ ವಿವಿಧ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸುವರು.  ಮಧ್ಯಾಹ್ನ 03.30 ಗಂಟೆಗೆ ಜಿಲ್ಲಾ ಪಂಚಾಯತ್ ಎದುರಿನ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಬಾಲಮಂದಿರಕ್ಕೆ ಭೇಟಿ ನೀಡುವರು.  ಸಂಜೆ 4.30 ಗಂಟೆಗೆ ಕಬೀರಾನಂದ ಆಶ್ರಮ ಕರುವಿನಕಟ್ಟೆ ಸರ್ಕಲ್ ಬಳಿಯ ವೃದ್ಧಾಶ್ರಮಕ್ಕೆ ಭೇಟಿ ನೀಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment