ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಮಾ. 02 : ಜಿಲ್ಲಾ ಕಾಂಗ್ರೆಸ್ ಇತರೆ ಹಿಂದುಳಿದ ವರ್ಗಗಳ ವಿಭಾಗದಿಂದ ಕರ್ನಾಟಕ ರಾಜ್ಯ ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರ ಜನ್ಮ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಇತರ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎನ್.ಡಿ. ಕುಮಾರ್ ನೇತೃತ್ವದಲ್ಲಿ ಕಬೀರಾನಂದಶ್ರಮದ ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ಬ್ರೆಡ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎನ್.ಡಿ.ಕುಮಾರ್ ನಮ್ಮ ನಾಯಕರು ಜನ್ಮ ದಿನಾಚರಣೆಯನ್ನು ಆಡಂಬರವಿಲ್ಲದೆ ಅನಾಥ ಮಕ್ಕಳಿಗೆ, ವೃದ್ಧಾಶ್ರಮದಲ್ಲಿನ ವೃದ್ದರಿಗೆ ಹಾಗೂ ಬಡವ ಬಲ್ಲಿದರಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್‍ಪೀರ್ ಮಾತನಾಡಿ ಒಳ್ಳೆಯ ದಿನವನ್ನು ಮತ್ತಷ್ಟು ಒಳ್ಳೆಯದನ್ನು ಮಾಡಲು ದಾನ ಧರ್ಮ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಟಿಪ್ಪು ಕಾಸಿಂಆಲಿ. ರವಿಕುಮಾರ್ ನಗರಸಭೆ ನಾಮ ನಿರ್ದೇಶಕ ಸದಸ್ಯರಾದ ಶಬ್ಬೀರ್ ಸಂದೀಪ್ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












