ಸುದ್ದಿಒನ್, ತುಮಕೂರು, ಡಿಸೆಂಬರ್. 28 : ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ. ತುಮಕೂರಿನ ಕ್ಯಾತಸಂದ್ರದ ಬಳಿ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ನಡೆದ ಘಟನೆ ಈಗ ಬೆಳಕಿಗೆ ಬಂದಿದೆ. ಸದ್ಯ ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.
ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಬೆಂಗಳೂರಿನ ಕಡೆಗೆ ಚಲಿಸುತ್ತಿತ್ತು. ಈ ವೇಳೆ ತಡರಾತ್ರಿ ಅಪಘಾತವಾಗಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಅಪಘಾತದಿಂದ ಹಾನಿಯಾಗಿದೆ.
ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರಿಗೂ ಯಾವುದೇ ರೀತಿಯ ಪ್ರಾಣಪಾಯವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















