ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತೆ ಸ್ಪೋಟಕ ವಿಚಾರ ಬಾಯ್ಬಿಟ್ಟಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿರುವ ಸಂತ್ರಸ್ತೆ, ಮುನಿರತ್ನ ಸಚಿವರಾಗಿದ್ದು ಹೇಗೆ ಎಂಬುದನ್ನು ತಿಳಿಸಿದ್ದಾರೆ.
ಮುನಿರತ್ನ ಅವರು ಮಾಜಿ ಮುಖ್ಯಮಂತ್ರಿಗಳೊಬ್ಬರಿಗೆ ಹನುಟ್ರ್ಯಾಪ್ ಮಾಡಿಸಿದ್ದಾರೆ. ಮುನಿರತ್ನ ಬಳಿ ಮಾಜಿ ಮುಖ್ಯಮಂತ್ರಿಗಳ ವಿಡಿಯೋ ಇದೆ. ಆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿಯೇ ಮುನಿರತ್ನ ಅವರು ಮಂತ್ರಿ ಸ್ಥಾನ ಪಡೆದುಕೊಂಡಿದ್ದರು. ಅವರ ಕೃತ್ಯಗಳನ್ನು ಸಹಿಸಲಾರದೆ ದೂರು ದಾಖಲಿಸಿದ್ದೇವೆ. 2020ರಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಿಚಯವಾಗಿದ್ದಾರೆ. ಮಮತಾ, ವೆಂಕಟೇಶ್ ಎಂಬುವವರ ಮೂಲಕ ಪರಿಚಯವಾಗಿದ್ದರು. ಶಾಸಕ ಮುನಿರತ್ನ ನನಗೆ ವಿಡಿಯೋ ಕರೆ ಕೂಡ ಮಾಡಿದ್ದಾರೆ. ಒಂದು ದಿನ ಗೋದಾಮಿನ ಬಳಿಯೂ ಕರೆದುಕೊಂಡು ಹೋಗಿದ್ದರು. ಅಲ್ಲಿ ನನ್ನನ್ನು ಹೆದರಿಸಿ, ಅತಚಯಾಚಾರ ಮಾಡಿದ್ದಾರೆ. ಅವರು ಜಾಮೀನು ಪಡೆದು ಹೊರಗೆ ಬಂದರೆ ನನಗೆ ಜೀವ ಭಯವಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.
ಮುನಿರತ್ನ ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಅದನ್ನು ಇಟ್ಟುಕೊಂಡು ಅವರು ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದ್ದಾರೆ. ಒಂದು ದಿನ ನನ್ನನ್ನು ಗೋಡೌನ್ ಬಳಿ ಕರೆದಿದ್ದ ಮುನಿರತ್ನ ನನ್ನನ್ನು ಎರಡನೇ ಮಹಡಿಗೆ ಕರೆದುಕೊಂಡು ಹೋಗಿದ್ದರು. ತಬ್ಬಿಕೊಳ್ಳಲು ಬಂದಿದ್ದರು. ಆಗ ದೂರ ತಳ್ಳಿದ್ದೆ. ನೀವೂ ತಂದೆ ಸಮಾನ ಸರ್ ಬಿಟ್ಟು ಬಿಡಿ ಎಂದು ಹೇಳಿದ್ದೆ. ಆಗ ದಿವಾನ್ ಮೇಲೆ ಕೂರಿಸಿಕೊಂಡು, ನನ್ನನ್ನು ಎಂಎಲ್ಎ ಆಗಿ ನೋಡುತ್ತಿದ್ದೀಯಾ. ನಾನೊಬ್ಬ ಕಾಂಟ್ರಾಕ್ಟರ್ ಎಂದು ಹೇಳಿದ್ದರು. ಅಲ್ಲದೆ ನನ್ನನ್ನು ಹೆದರಿಸಿ ದಿವಾನ್ ಕಾಟ್ ಮೇಲೆಯೇ ಅತ್ಯಾಚಾರ ಮಾಡಿದ್ದರು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












