ಚಿತ್ರದುರ್ಗ. ಫೆ.10: ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇದೇ ಫೆ.11ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1.30ಕ್ಕೆ ಚಳ್ಳಕೆರೆಗೆ ಆಗಮಿಸುವರು. ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮಕ್ಕೆ ಭೇಟಿ ನೀಡಿ, ಜಲಾನಯನ ಅಭಿವೃದ್ಧಿ ಇಲಾಖೆಯ RAD-RAFTAR ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 4ಕ್ಕೆ ರೇಣುಕಾಪುರದಿಂದ ಹೊರಟು ಸಂಜೆ 5ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಸಂಜೆ 5.30ಕ್ಕೆ ಚಿತ್ರದುರ್ಗದಿಂದ ಹೊರಟು ಸಂಜೆ 6ಕ್ಕೆ ಭರಮಸಾಗರಕ್ಕೆ ಆಗಮಿಸಿ, ಸಂಜೆ 6.30ಕ್ಕೆ ತರಳಬಾಳು ಹುಣ್ಣಿಮೆ ಮಹೋತ್ಸವ-2025 ಅಂಗವಾಗಿ ಏರ್ಪಡಿಸಲಾಗಿರುವ “ಕೃಷಿ ಮತ್ತು ಜಲಸಂರಕ್ಷಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಭರಮಸಾಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.
ಸಣ್ಣ ನೀರಾವರಿ ಸಚಿವರ ಜಿಲ್ಲಾ ಪ್ರವಾಸ
ಚಿತ್ರದುರ್ಗ. ಫೆ.10: ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಇದೇ ಫೆ.11ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 6ಕ್ಕೆ ರಾಯಚೂರಿನಿಂದ ಹೊರಟು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಬೆಳಿಗ್ಗೆ 11ಕ್ಕೆ ಚಿತ್ರದುರ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರ ಸುಕ್ಷೇತ್ರ ಶ್ರೀ ಭಗೀರಥ ಪೀಠ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12.30ಕ್ಕೆ ಬ್ರಹ್ಮವಿದ್ಯಾನಗರ ಸುಕ್ಷೇತ್ರದಿಂದ ಹೊರಟು ಮಧ್ಯಾಹ್ನ 1ಕ್ಕೆ ಹೊಸದುರ್ಗಕ್ಕೆ ಆಗಮಿಸಿ, ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 3ಕ್ಕೆ ಹೊಸದುರ್ಗದಿಂದ ಹೊರಟು ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಸಣ್ಣ ನೀರಾವರಿ ಇಲಾಖೆಯ ಚಿತ್ರದುರ್ಗ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.50ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5ಕ್ಕೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ನೀರಾವರಿ ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.
ಬೆಂಗಳೂರು: ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ನಿನ್ನೆಯಷ್ಟೇ 35 ರೂಪಾಯಿ ಏರಿಕೆಯಾಗಿತ್ತು. ಇಂದು ನೋಡಿದ್ರೆ 87 ರೂಪಾಯಿ…
ಚಳ್ಳಕೆರೆ : ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಎರಡು ದಿನಗಳ ಕಾರ್ಯಕ್ರಮದಲ್ಲಿ ಗ್ರಾಮಿಣ ಜಾನಪದ ಶೈಲಿಯ ತಮಟೆ…
ಈ ರಾಶಿಯವರಿಗೆ ಅದೃಷ್ಟದ ಯೋಗಗಳ ಸುರಿಮಳೆ, ಮಂಗಳವಾರದ ರಾಶಿ ಭವಿಷ್ಯ 11 ಫೆಬ್ರವರಿ 2025 ಸೂರ್ಯೋದಯ - 6:48 AM…
ಹಿರಿಯೂರು : ನಗರದ ತಾಲೂಕು ಕಚೇರಿ ಮುಂಭಾಗ ತಾಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ವತಿಯಿಂದ ಸೋಮವಾರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ…
ಚಿತ್ರದುರ್ಗ: ವೈದ್ಯರನ್ನು ನಂಬುವಷ್ಟು ಜನ ದೇವರನ್ನು ನಂಬುವುದಿಲ್ಲವೇನೊ. ಇಂಥ ವೈದ್ಯರು ಸಾವು ಬದುಕಿನ ನಡುವೆ ಹೋರಾಡುವ ರೋಗಿಗಳ ಕಡೆ ಗಮನ…
ಬೆಂಗಳೂರು: ಮೊದಲಿನಿಂದಾನೂ ಶಾಸಕ ಯತ್ನಾಳ್, ಯಡಿಯೂರಪ್ಪ ಹಾಗೂ ಪುತ್ರರ ವಿರುದ್ಧ ವಾಗ್ದಾಳಿ ನಡೆಸುತ್ತಲೆ ಇದ್ದಾರೆ. ಇದರ ಮಧ್ಯೆ ಯಡಿಯೂರಪ್ಪ ಅವರಿಗೆ…