ಶಿವಮೊಗ್ಗದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ : ಶಿಕ್ಷಣ ಸಚಿವರು ಕೊಟ್ಟ ಸಲಹೆಗಳು ಇಲ್ಲಿವೆ..!

suddionenews
1 Min Read

 

ಶಿವಮೊಗ್ಗ: ಜಿಲ್ಲೆಗೆ ಭೇಟಿ ನೀಡಿದ ಸಚಿವ ಬಿ ಸಿ ನಾಗೇಶ್ ಶಿಕ್ಷಣ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಶಿಕ್ಷ ಇಲಾಖೆಯ ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಿದ್ದಾರೆ.

ಇಲಾಖೆಯ ಅಧಿಕಾರಿಗಳು ಇತ್ತಮ ಗುಣಮಟ್ಟದ ಶಿಕ್ಷಣದ ಕಡೆ ಗಮನ ಹರಿಸಬೇಕೆಂದು ಸೂಚನೆ ನೀಡಿದ್ದಾರೆ. ತರಗತಿಯಲ್ಲಿ ಕುಳಿತುಕೊಂಡು ಶಿಕ್ಷಕರ ಬೋಧನಾ ಮಟ್ಟವನ್ನು ಗಮನಿಸಿ ಅವರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಈ ವರ್ಷ ಮಾಡಿದ ರೀತಿಯಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳಲ್ಲೂ ಮಾಡಬೇಕು. ಶಾಲೆಗಳಲ್ಲಿ ಲಭ್ಯವಿರುವ ಮೂಲಸೌಲಭ್ಯಗಳನ್ನು ಅನುಸರಿಸಿ ಶಾಲೆಗಳನ್ನು ಎ, ಬಿ ಮತ್ತು ಸಿ ಕೆಟಗರಿಯಲ್ಲಿ ಗುರುತಿಸಲಾಗುತ್ತಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಮುಂದಿನ ಒಂದು ವರ್ಷದ ಒಳಗಾಗಿ ಬಿ ಕೆಟಗರಿಯಲ್ಲಿರುವ ಎಲ್ಲಾ ಶಾಲೆಗಳನ್ನು ಎ ಕೆಟಗರಿಗೆ ಮೇಲ್ದರ್ಜೆಗೇರಿಸಬೇಕು ಎಂದಿದ್ದಾರೆ.

ಹಾಗೇ ಇಲಾಖೆಯ ಅನುದಾನ ಮಾತ್ರವಲ್ಲದೆ, ಉದ್ಯೋಗ ಖಾತ್ರಿ ಯೋಜನೆ, ಜೆಎಂಎಂ ಯೋಜನೆಯ ಲಾಭವನ್ನು ಪಡೆದುಕೊಂಡು ಪ್ರತಿ ಶಾಲೆಗೆ ಕುಡಿಯುವ ನೀರು, ಶೌಚಾಲಯ, ಕಂಪೌಂಡ್, ಆಟದ ಮೈದಾನ ವ್ಯವಸ್ಥೆಯನ್ನು ಮಾಡಬೇಕು. ಶಾಲೆಗೆ ದಾಖಲಾಗುವ ಮಕ್ಕಳು ವಿದ್ಯಾಭ್ಯಾಸ ಮೊಟಕುಗೊಳಿಸುವ ಪ್ರಕರಣಗಳ ಮೇಲೆ ನಿಗಾ ವಹಿಸಬೇಕು. ವಿಶೇಷವಾಗಿ 5ನೇ ತರಗತಿ ಬಳಿಕ ಹಲವು ಮಕ್ಕಳು ವಿದ್ಯಾಭ್ಯಾಸ ಮುಂದುವರೆಸದೇ ಇರುವ ಬಗ್ಗೆ ಪರಿಶೀಲಿಸಬೇಕು. ಅಂತಹ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ವಿಶೇಷ ದಾಖಲಾತಿ ಅಭಿಯಾನ ನಡೆಸಬೇಕು ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *