ಕವಾಡಿಗರಹಟ್ಟಿಗೆ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ :ತತಕ್ಷಣವೇ ಸರ್ಕಾರದಿಂದ ಪರಿಹಾರ ಧನ ನೀಡಲು ಸೂಚನೆ

1 Min Read

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಕರ್ನಾಟಕ ವಾರ್ತೆ .ಆ.4:   ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಮನೆಗಳಿಗೆ ಶುಕ್ರವಾರ ಸಂಜೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತತಕ್ಷಣವೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ವಿವರದ ಬಗ್ಗೆ  ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಪರಿಹಾರ ನೀಡುವಲ್ಲಿ ವಿಳಂಬ ಸಲ್ಲದು. ರಾಜ್ಯ ಸರ್ಕಾರ ನೀತಿಯಂತೆ ಪರಿಹಾರ ನೀಡುವುದರ ಜೊತೆಗೆ, ಸರ್ಕಾರದ ಸೌಲಭ್ಯಗಳನ್ನು ನೀಡುವ ಕುರಿತು ಯೋಚಿಸಲಾಗುವುದು. ಕುಟುಂಬದವರ ನೋವಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಗ್ರಾಮಸ್ಥರಿಗೆ ನೀರಿನ ಮಾದರಿಗಳ ವಿಧಿ ವಿಜ್ಞಾನ ಪರೀಕ್ಷೆ ಮೇಲೆ ಅನುಮಾನ ಇದ್ದರೆ, ಪುನರ್ ತನಿಖೆ ಮಾಡಲಾಗುವುದು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಿಂದ ಮಾಹಿತಿ ಪಡೆದ ಸಚಿವರು, ಅಗತ್ಯ ಬಿದ್ದರೆ ಚಿಕಿತ್ಸೆ ಪಡೆಯುತ್ತಿರುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ದಾಖಲಿಸುವಂತೆ ತಿಳಿಸಿದರು.

ದಲಿತ ಸಂಘಟನೆಯ ಮುಖಂಡರು ಸಚಿವರಿಗೆ ಘಟನೆ ಕಾರಣರಾದ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಮೃತರ ಕುಟುಂಬಕ್ಕೆ ಸರ್ಕಾರದಿಂದ ಬರಬೇಕಾದ ಸವಲತ್ತುಗಳನ್ನು ತುರ್ತಾಗಿ ಕಲ್ಪಿಕೊಡುವಂತೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವಿರೇಂದ್ರ, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಸೇರಿದಂತೆ ಮತ್ತಿರರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *